Gl harusha
ಅಪರಾಧ

ಮಂಜಲ್ಪಡ್ಪು: ಸ್ಕೂಲ್ ಬಸ್ – ಕಾರ್, ಪಿಕಪ್ – ಇನ್ನೋವಾ ಡಿಕ್ಕಿ!

ಖಾಸಗಿ ಶಾಲಾ ವಾಹನ ಮತ್ತು ಕಾರ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರಿನ ಮಂಜಲ್ಪಡ್ಪು ಎಂಬಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಖಾಸಗಿ ಶಾಲಾ ವಾಹನ ಮತ್ತು ಕಾರ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರಿನ ಮಂಜಲ್ಪಡ್ಪು ಎಂಬಲ್ಲಿ ನಡೆದಿದೆ.

srk ladders
Pashupathi
Muliya

ಘಟನೆ ಪರಿಣಾಮ ಕಾರಿನ ಮುಂಭಾಗ ಜಖಂಗೊಂಡಿದ್ದು ಏರ್ ಬ್ಯಾಗ್ ತೆರೆದುಕೊಂಡಿದೆ. ಕಾರ್ ನಲ್ಲಿದ್ದ ಓರ್ವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಈ ವೇಳೆ ಹಿಂಬದಿ ಇದ್ದ ಪಿಕಪ್ ವಾಹನಕ್ಕೆ ಇನ್ನೋವಾ ಕಾರು ಕೂಡ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts