ಲಕ್ನೋದಿಂದ ಮುಂಬೈಗೆ ತೆರಳುತ್ತಿದ್ದ ಪುಷ್ಪಕ ಎಕ್ಸ್ ಪ್ರೆಸ್ ರೈಲಿನಲ್ಲಿ (Train) ಬೆಂಕಿ ಕಾಣಿಸಿಕೊಂಡಿದೆ ಎಂಬ ಸುಳ್ಳು ಸುದ್ದಿ ಹರಡಿದ ಕಾರಣ ಆತಂಕಗೊಂಡ ಪ್ರಯಾಣಿಕರು ತಮ್ಮ ಪ್ರಾಣ ಉಳಿಸಿಕೊಳ್ಳಲು ರೈಲಿನಿಂದ ಕೆಳಗೆ ಜಿಗಿದಿದ್ದಾರೆ. ಇದೇ ವೇಳೆ ಪಕ್ಕದ ಹಳಿಯ ಮೇಲೆ ಬರುತ್ತಿದ್ದ ಕರ್ನಾಟಕ ಎಕ್ಸ್‌ಪ್ರೆಸ್ ರೈಲಿನ ಚಕ್ರದಡಿ ಸಿಲುಕಿ 11 ಜನರ ದೇಹಗಳು ಛಿದ್ರವಾಗಿದೆ.
ರೈಲು ಮಹಾರಾಷ್ಟ್ರದ ಜಲಗಾಂವ್‌ನ ಪರಾಂಡ ನಿಲ್ದಾಣ ಸಮೀಪಿಸುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ ಎಂಬ ಸುದ್ದಿ ಹರಡಿದೆ. ಕೂಡಲೇ ಪುಷ್ಪಕ್ ಎಕ್ಸ್‌ಪ್ರೆಸ್‌ನಲ್ಲಿದ್ದ ಕೆಲವು ಪ್ರಯಾಣಿಕರು ರೈಲಿನ ಚೈನ್ ಎಳೆದು 30-40 ಜನ ರೈಲಿನಿಂದ ಕೆಳಗೆ ಜಿಗಿದಿದ್ದರು. ಕೆಲವರು ದೂರ ಓಡಿಹೋದರೆ ಇನ್ನು ಕೆಲವರು ಪಕ್ಕದ ಹಳಿ ಮೇಲೆ ನಿಂತಿದ್ದರು. ಈ ವೇಳೆ ಹಳಿಯಲ್ಲಿ ನಿಂತಿದ್ದವರಿಗೆ ಕರ್ನಾಟಕ ಎಕ್ಸ್‌ಪ್ರೆಸ್ ರೈಲು ಡಿಕ್ಕಿಯಾಗಿದೆ.