Gl harusha
ಅಪರಾಧ

KSRTC – ಟಿಪ್ಪರ್ ಓವರ್ ಟೇಕ್; ಬಸ್ಸಿನಲ್ಲಿದ್ದ ಮಹಿಳೆಯ ಕುತ್ತಿಗೆ, ಕೈ ತುಂಡು

ಸಾರಿಗೆ ಬಸ್ ಮತ್ತು ಟಿಪ್ಪರ್ ನಡುವಿನ ಓವರ್‌ ಟೇಕ್ ಸಂದರ್ಭ ಸಾರಿಗೆ ಬಸ್ಸಿನಲ್ಲಿ ಕುಳಿತಿದ್ದ ಮಹಿಳೆಯ ಕುತ್ತಿಗೆ ಮತ್ತು ಕೈ ತುಂಡಾಗಿ ಆಕೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರಿನಿಂದ ಗುಂಡ್ಲುಪೇಟೆಗೆ  ತೆರಳುತ್ತಿದ್ದ ಸಾರಿಗೆ ಬಸ್ ಮತ್ತು ಟಿಪ್ಪರ್ ನಡುವಿನ ಓವರ್‌

srk ladders
Pashupathi
Muliya

ಟೇಕ್ ಸಂದರ್ಭ ಸಾರಿಗೆ ಬಸ್ಸಿನಲ್ಲಿ ಕುಳಿತಿದ್ದ ಮಹಿಳೆಯ ಕುತ್ತಿಗೆ ಮತ್ತು ಕೈ ತುಂಡಾಗಿ ಆಕೆ ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ ನಂಜನಗೂಡು ತಾಲೂಕಿನ ಸಿಂಧುವಳ್ಳಿ ಗ್ರಾಮದ ಬಳಿ ಜ.25ರ ಶನಿವಾರ ನಡೆದಿದೆ.

ಬೇಗೂರು ಸಮೀಪದ ಆಲಹಳ್ಳಿ ಗ್ರಾಮದ ಶಿವಲಿಂಗಮ್ಮ (43 ವ) ಮೃತ ಮಹಿಳೆ ಎಂದು ತಿಳಿದು ಬಂದಿದೆ.

ಮೈಸೂರು-ಗುಂಡ್ಲುಪೇಟೆಗೆ ನಂಜನಗೂಡು ಮಾರ್ಗವಾಗಿ ತೆರಳುತ್ತಿದ್ದ ಸಾರಿಗೆ ಬಸ್ಸಿನಲ್ಲಿ ಮಹಿಳೆ ಶಿವಲಿಂಗಮ್ಮ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಸಿಂಧುವಳ್ಳಿ ಗ್ರಾಮದ ಬಳಿ ಬಸ್ಸಿನ ಕಿಟಕಿಯಿಂದ ಆಕೆ ಕತ್ತನ್ನು ಹೊರಹಾಕಿದ್ದ ಸಂದರ್ಭ ಬಾರಿ ಗೂಡ್ಸ್‌ ವಾಹನ ಮತ್ತು ಸಾರಿಗೆ ಬಸ್‌ ನಡುವೆ ಕ್ಷಣಾರ್ಧದಲ್ಲಿ ಅಪಘಾತವಾದ ಪರಿಣಾಮ ಬಸ್ಸಿನಲ್ಲಿ ಕುಳಿತಿದ್ದ ಶಿವಲಿಂಗಮ್ಮ ಎಂಬವರ ಕುತ್ತಿಗೆ ಮತ್ತು ಕೈ ತುಂಡಾಗಿ ಆಕೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಅಪಘಾತ ನಡೆದ ಸ್ಥಳದಲ್ಲಿ ಗೂಡ್ಸ್‌ ವಾಹನ ನಾಪತ್ತೆಯಾಗಿದೆ.

ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯ ಪಿಎಸ್‌ಐ ಸಿದ್ದರಾಜು ಮತ್ತು ಸಿಬ್ಬಂದಿ ಮಹೇಂದ್ರ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ಸಾರಿಗೆ ಬಸ್ ವಶಕ್ಕೆ ಪಡೆದುಕೊಂಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts