ಅಪರಾಧ

ಕನ್ಯಾನ: ಮೃತ ಕಾಡಾನೆ ಪತ್ತೆ!!

GL
ಕೇರಳ ಗಡಿ ಸಮೀಪದ ಕನ್ಯಾನ ಎಂಬಲ್ಲಿ ಕಾಡಾನೆ ಮೃತಪಟ್ಟ ರೀತಿಯಲ್ಲಿ ಪತ್ತೆಯಾಗಿದೆ. ಭಾನುವಾರ ಈ ಘಟನೆ ಬೆಳಕಿಗೆ ಬಂದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಸುಳ್ಯ : ತಾಲೂಕಿನ ಮಂಡೆಕೋಲು ಗ್ರಾಮದ ಕೇರಳ ಗಡಿ ಸಮೀಪದ ಕನ್ಯಾನ ಎಂಬಲ್ಲಿ ಕಾಡಾನೆ ಮೃತಪಟ್ಟ ರೀತಿಯಲ್ಲಿ ಪತ್ತೆಯಾಗಿದೆ. ಭಾನುವಾರ ಈ ಘಟನೆ ಬೆಳಕಿಗೆ ಬಂದಿದೆ.

chennai-shopping
maithri

ಮಂಡೆಕೋಲು ರಿಸರ್ವ್ ಫಾರೆಸ್ಟ್‌ನಲ್ಲಿ ಸ್ಥಳೀಯರಿಗೆ ಕಾಡಾನೆ ಮೃತದೇಹ ಕಂಡುಬ೦ದಿದ್ದು ಅವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಕಾದಾಟದಲ್ಲಿ ಸಾವು ಶಂಕೆ:

ಮೃತ ಆನೆ ಹಾಗೂ ಬೇರೆ ಗಂಡು ಕಾಡಾನೆಗಳ ನಡುವೆ ಕಾದಾಟ (ಜಗಳ) ನಡೆದು ಇದರಿಂದ ತೀವ್ರ ರಕ್ತಸ್ರಾವಗೊಂಡು ಆನೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಆನೆಯ ದೇಹದಲ್ಲಿ ತಿವಿದು, ಗಾಯ ಗೊಂಡು ರಕ್ತಸ್ರಾವವಾಗಿರುವ ಗುರುತು ಕಂಡುಬಂದಿದೆ. ಅರಣ್ಯ ಭಾಗದ ಬೇರೆ ಕಡೆಯಲ್ಲಿ ಕಾದಾಟ ನಡೆದಿದ್ದು, ಇಲ್ಲಿ ಬಂದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಸುಳ್ಯ ಎಸಿಎಫ್ ಪ್ರವೀಣ್ ಕುಮಾ‌ರ್ ಶೆಟ್ಟಿ ವಲಯ ಅರಣ್ಯಾಧಿಕಾರಿ ಮಂಜುನಾಥ್ ಎನ್. ಸೇರಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬಂದಿ ಭೇಟಿ ನೀಡಿದ್ದಾರೆ. ರಾತ್ರಿ ವೇಳೆಗೆ ಸುಳ್ಯ ಪಶುವೈದ್ಯಾಧಿಕಾರಿ ಡಾ| ನಿತಿನ್ ಪ್ರಭು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

ರಾತ್ರಿಯಾಗಿರುವ ಹಿನ್ನೆಲೆಯಲ್ಲಿ ಮೃತ ಕಾಡಾನೆಯ ಮರಣೋತ್ತರ ಪರೀಕ್ಷೆ, ಇನ್ನಿತರ ಕಾರ್ಯಗಳನ್ನು ಸೋಮವಾರ (ಜ.27) ನಡೆಸಲಾಗುವುದು ಎಂದು ಅರಣ್ಯಾಧಿಕಾರಿ ಮಂಜುನಾಥ್ ಅವರು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 105