ಬೆಂಗಳೂರು: ಬೆಂಗಳೂರಿನ ಬೈಕ್ ಶೋರೂಂ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 30 ಕ್ಕೂ ಬೈಕ್ ಗಳು ಬೈಕ್ ಗಳು ಸುಟ್ಟು ಕರಕಲಾಗಿದೆ ಎಂದು ಹೇಳಲಾಗುತ್ತಿದೆ.
ರಾಜಾಜಿನಗರದ ರಾಜ್ ಕುಮಾರ್ ರಸ್ತೆಯಲ್ಲಿರುವ ಪ್ಲಾನೆಟ್ ಹೊಂಡಾ ಶೋ ರೋಂನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಶೋರೋಂ ಹೊತ್ತಿ ಉರಿಯುತ್ತಿದೆ.
ಒಕಿನೋವ ಎಂಬ ಬ್ರಾಂಡ್ ನ ಎಲೆಕ್ಟಿಕ್ ಬೈಕ್ ಶೋರೂಂ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ರಾಜಾಜಿನಗರ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುತ್ತಿದ್ದಾರೆ. ಶೋರೋಂನಲ್ಲಿ 30 ಕ್ಕೂ ಹೆಚ್ಚು ಬೈಕ್ ಗಳು ಇದ್ದವು ಎಂದು ಹೇಳಲಾಗುತ್ತಿದೆ.
ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸುತ್ತಿದ್ದಾರೆ.
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸಿಬ್ಬಂದಿಗಳು ಶೋರೂಂನಿಂದ ಹೊರಗಡೆ ಬಂದಿದ್ದಾರೆ