Gl jewellers
ಅಪರಾಧ

ಇನ್ಫೋಸಿಸ್ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್‌ ಸೇರಿ 18 ಮಂದಿ ವಿರುದ್ಧ ಅಟ್ರಾಸಿಟಿ ಕೇಸ್

Karpady sri subhramanya
ಇನ್ಫೋಸಿಸ್ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್, ಐಎಎಸ್‌ಸಿ ಮಾಜಿ ನಿರ್ದೇಶಕ ಪಿ. ಬಲರಾಮ್ ಸೇರಿದಂತೆ 18 ಜನರ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಸೋಮವಾರ ಕೇಸ್ ದಾಖಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

SRK Ladders
Akshaya College

ಬೆಂಗಳೂರು: ಇನ್ಫೋಸಿಸ್ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್, ಐಎಎಸ್‌ಸಿ ಮಾಜಿ ನಿರ್ದೇಶಕ ಪಿ. ಬಲರಾಮ್ ಸೇರಿದಂತೆ 18 ಜನರ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಸೋಮವಾರ ಕೇಸ್ ದಾಖಲಾಗಿದೆ.

ಬೆಂಗಳೂರಿನ 71ನೇ ಸಿಟಿ ಸಿವಿಲ್ ಮತ್ತು ಸೆಷನ್ ಕೋರ್ಟ್ ನಿರ್ದೇಶನದ ಮೇರೆಗೆ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Sampya jathre

ಭೋವಿ ಸಮುದಾಯಕ್ಕೆ ಸೇರಿದ ಸಣ್ಣದುರುಗಪ್ಪ ಅವರ ಅರ್ಜಿಗೆ ಸಂಬಂಧಿಸಿದಂತೆ ದೂರು ದಾಖಲಿಸಲಾಗಿದೆ.

2014ರಲ್ಲಿ ಐಐಎಸ್ಸಿಯ ಸುಸ್ಥಿರ ತಂತ್ರಜ್ಞಾನ ಕೇಂದ್ರದಲ್ಲಿ ಅಧ್ಯಾಪಕರಾಗಿದ್ದಾಗ ತಮ್ಮನ್ನು ನಕಲಿ ಹನಿಟ್ರ್ಯಾಪ್ ಮಾಡಿಸಿ ಸೇವೆಯಿಂದ ವಜಾ ಮಾಡಲಾಗಿದೆ. ಅಲ್ಲದೆ, ಕ್ರಿಸ್ ಗೋಪಾಲಕೃಷ್ಣನ್ ಸೇರಿ 18 ಮಂದಿ 2008ರಿಂದ 2025 ರವರೆಗೆ ಜಾತಿ ನಿಂದನೆ ದೌರ್ಜನ್ಯ ನಡೆಸುತ್ತಾ ಬಂದಿದ್ದಾರೆ ಎಂದು ದುರುಗಪ್ಪ ಆರೋಪಿಸಿ ದೂರು ನೀಡಿದ್ದಾರೆ.

ಕ್ರಿಸ್ ಗೋಪಾಲಕೃಷ್ಣನ್ ಅವರು ಐಐಎಸ್ಸಿ ಟ್ರಸ್ಟಿ ಬೋರ್ಡ್ ಸದಸ್ಯರಾಗಿದ್ದಾರೆ. ಗೋವಿಂದನ್ ರಂಗರಾಜನ್, ಶ್ರೀಧರ್ ವಾರಿಯರ್, ಸಂಧ್ಯಾ ವಿಶ್ವೇಶ್ವರಯ್ಯ ಸೇರಿ 18 ಮಂದಿ ವಿರುದ್ಧ ದೂರು ನೀಡಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts