pashupathi
ಅಪರಾಧ

ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ 1ಕೋಟಿಗಿಂತಲೂ ಅಧಿಕ ಹಣ!!

tv clinic
ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರೊಂದರಲ್ಲಿ 1ಕೋಟಿ 15 ಲಕ್ಷ ಹಣ ದೊರೆತಿದ್ದು ಅದನ್ನು ಅಂಕೋಲಾ ಪೊಲೀಸರು ವಶಕ್ಕೆ ಪಡೆದ ಘಟನೆ ಜ.28ರ ಮಂಗಳವಾರ ಸಂಜೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಅಂಕೋಲಾ : ತಾಲೂಕಿನ ರಾಮನಗುಳಿ ಬಳಿ ನಿರ್ಜನ

akshaya college

ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರೊಂದರಲ್ಲಿ 1ಕೋಟಿ 15 ಲಕ್ಷ ಹಣ ದೊರೆತಿದ್ದು ಅದನ್ನು ಅಂಕೋಲಾ ಪೊಲೀಸರು ವಶಕ್ಕೆ ಪಡೆದ ಘಟನೆ ಜ.28ರ ಮಂಗಳವಾರ ಸಂಜೆ ನಡೆದಿದೆ.

ಕೆಎ 51 ಎಮ್.ಬಿ 9634 ನಂಬರ್ ಪ್ಲೇಟಿನ ಅನುಮಾನಾಸ್ಪದ ಕಾರು ಇದಾಗಿದ್ದು ಕಾರಿನ ರಿಜಿಸ್ಟ್ರೇಷನ್ ನಂಬರ್ ನ್ನು ಪರಿಶೀಲಿಸಿದಾಗ ಆಲೋಜ್ ಕಾರು ಎಂದು ತೋರಿಸುತ್ತಿದ್ದು, ಮಡಿಕೇರಿ ಆರ್.ಟಿ.ಓ ಪಾಸಿಂಗ್ ಹೊಂದಿದೆ. ಅಸಲಿಗೆ ಇದು ಕ್ರೇಟಾ ಕಾರಾಗಿದ್ದು, ಇದು ಹಲವು ಸಂಶಯಗಳಿಗೆ ಕಾರಣವಾಗಿದೆ.

ಈ ಕಾರಿನ ಬೋನಟ್, ಡಿಕ್ಕಿ ತೆರೆದ ಸ್ಥಿತಿಯಲ್ಲಿದ್ದು, ಕಾರಿನ ಸೀಟ್ ಕಿತ್ತು ಹೊರಗೆ ಬಿದ್ದಿರುವ ಸ್ಥಿತಿಯಲ್ಲಿ, ಕಿಟಕಿ ಗಾಜುಗಳು ಒಡೆದ ಸ್ಥಿತಿಯಲ್ಲಿರುವುದು ಕಂಡುಬಂದಿದೆ.

ಈ ವಿಷಯವನ್ನು ಸ್ಥಳೀಯರು ಅಂಕೋಲಾ ಪೋಲಿಸ್ ಠಾಣೆಗೆ ಮಾಹಿತಿ ನೀಡಿದಾಗ ತಕ್ಷಣ ಸ್ಥಳಕ್ಕೆ ಆಗಮಿಸಿದ ಸಿಪಿಐ ಚಂದ್ರಶೇಖರ ಮಠಪತಿ, ಪಿಎಸ್‌ಐ ಉದ್ದಪ್ಪ ಧರೇಪ್ಪನವರ್‌, ಪಿಎಸ್‌ಐ ಸುನೀಲ್, ಎ.ಎಸ್.ಐ ರಿತೇಶ ನಾಗೇಕ‌ರ್, ಹವಾಲ್ದಾರ ಸಂತೋಷ ಹಾಗೂ ಸಿಬ್ಬಂದಿಗಳು ಮಾಹಿತಿ ಪಡೆದು ಪರಿಶೀಲಿಸಿ, ಪಂಚನಾಮೆ ಮಾಡಿ ಕಾರನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ ಕಾರಿನಲ್ಲಿ ಕಬ್ಬಿಣದ ಬಾಕ್ಸ್ ಸಿಕ್ಕಿದ್ದು ಅದನ್ನು ತೆರೆದು ನೋಡಿದಾಗ ಅದರಲ್ಲಿ 1ಕೋಟಿ 15 ಲಕ್ಷ ಹಣ ಇರುವುದು ಕಂಡುಬಂದಿದೆ.

ಈ ಕುರಿತು ತನಿಖೆ ನಡೆಯುತ್ತಿದ್ದು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts