pashupathi
ಅಪರಾಧ

ಬಂಟ್ವಾಳ: ದ್ವಿಚಕ್ರ ವಾಹನ ಡಿಕ್ಕಿ, ರಸ್ತೆ ಬದಿ ನಿಂತಿದ್ದ ಮಹಿಳೆ ಮೃತ್ಯು!!

tv clinic
ರಸ್ತೆ ದಾಟಲು ನಿಂತಿದ್ದ ಮಹಿಳೆಯೋರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಬಿ-ಮೂಡ ಗ್ರಾಮದ ಮಿತ್ತಬೈಲು ಜುಮ್ಮಾ ಮಸೀದಿ ಎದುರು ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ರಸ್ತೆ ದಾಟಲು ನಿಂತಿದ್ದ ಮಹಿಳೆಯೋರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಬಿ-ಮೂಡ ಗ್ರಾಮದ ಮಿತ್ತಬೈಲು ಜುಮ್ಮಾ ಮಸೀದಿ ಎದುರು ನಡೆದಿದೆ.

akshaya college

ಮೃತಪಟ್ಟ ಮಹಿಳೆಯನ್ನು ಬಂಟ್ವಾಳ ತಾಲೂಕು ಪುದು ಗ್ರಾಮ ನಿವಾಸಿ ಬೀಪಾತುಮ್ಮಎಂದು ಗುರುತಿಸಲಾಗಿದೆ.

ಜ.30 ರಂದು ಬೀಪಾತುಮ್ಮರವರು ಮಿತ್ತಬೈಲು ಮೊಹಿದ್ದೀನ್ ಜುಮ್ಮಾ ಮಸೀದಿ ಹಾಲ್‌ನಲ್ಲಿ ಸಂಬಂಧಿಕರೊಬ್ಬರ ಮದುವೆ ಕಾರ್ಯಕ್ರಮ ಮುಗಿಸಿ ವಾಪಾಸು ಮನೆ ಕಡೆಗೆ ಹೋಗುತ್ತಿದ್ದ ವೇಳೆ ಬಂಟ್ವಾಳ ತಾಲೂಕು ಬಿ-ಮೂಡ ಗ್ರಾಮದ ಮಿತ್ತಬೈಲು ಜುಮ್ಮಾ ಮಸೀದಿ ಎದುರು ಹೆದ್ದಾರಿಯನ್ನು ದಾಟಲು ರಸ್ತೆ ಬದಿಯಲ್ಲಿ ನಿಂತಿದ್ದರು.

ಈ ವೇಳೆ ಮಂಗಳೂರು ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಂದ KA-19-HN-1984ನೇ ಮೋಟಾರ್ ಸೈಕಲನ್ನು ಅದರ ಸವಾರ ಮಿಥುನ್ ಎಂಬಾತ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದುರಸ್ತೆ ನಿಂತಿದ್ದ ಬೀಪಾತುಮ್ಮರವರಿಗೆ ಎದುರಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಅವರು ಡಾಂಬರು ರಸ್ತೆಗೆ ಬಿದ್ದು ತಲೆಗೆ, ಕೈಕಾಲುಗಳಿಗೆ, ಎದೆಗೆ ಗುದ್ದಿದ ಹಾಗೂ ತರಚಿದ ರಕ್ತ ಗಾಯಗೊಂಡವರನ್ನು ಮಂಗಳೂರು ಜನಪ್ರಿಯ ಆಸ್ಪತ್ರೆಗೆ ಕರೆದುಕೊಂಡು ಬಂದು ಅಲ್ಲಿಯ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣಾ ಅ.ಕ್ರ 14/2025 ಕಲಂ 281,106 BNS ಯಂತೆ ಪ್ರಕರಣ ದಾಖಲಾಗಿರುತ್ತದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts