Gl
ಅಪರಾಧ

ಡಿವೈಡರ್‌ಗೆ ಬೈಕ್‌ ಡಿಕ್ಕಿ: ಯುವಕ ಸ್ಥಳದಲ್ಲಿ ಸಾವು!!

ಡಿವೈ ಡರ್‌ಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಯುವಕನ ತಲೆ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ  ಸಂಭವಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಗುರುವಾಯನಕೆರೆ- ವೇಣೂರು ರಸ್ತೆಯ ದ್ವಾರದಿಂದ ಸಮೀಪ ಡಿವೈ ಡರ್‌ಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಯುವಕನ ತಲೆ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ  ಸಂಭವಿಸಿದೆ.

rachana_rai
Pashupathi
akshaya college
Balakrishna-gowda

ಬಂಟ್ವಾಳ ತಾಲೂಕು ಸಿದ್ದಕಟ್ಟೆ ಸಮೀಪದ ಉಕ್ಕಿನಡ್ಕ ನಿವಾಸಿ ಪ್ರಶಾಂತ್‌ ಪೂಜಾರಿ (೩೦ವ) ಮೃತಪಟ್ಟವರು. ಗುರುವಾಯನಕೆರೆಯಿಂದ ವೇಣೂರು ಕಡೆಗೆ ವೇಗವಾಗಿ ಹೋಗುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ದ್ವಾರದದಿಂದ ಸ್ವಲ್ಪ ಮಂದೆ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಚಾಲಕ ಎಸೆಯಲ್ಪಟ್ಟು ತಲೆ ವಿದ್ಯುತ್‌ ಕಂಬಕ್ಕೆ ಹೊಡೆದ ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಆಗಮಿಸಿ, ಸ್ಥಳೀಯರ ಸಹಕಾರದಲ್ಲಿ ಮೃತದೇಹವನ್ನು ಬೆಳ್ತಂಗಡಿ ಆಸ್ಪತ್ರೆಗೆ ಸಾಗಿಸಲಾಗಿದೆ.

pashupathi

ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts