ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ರಸ್ತೆ ಬದಿಯ ಚರಂಡಿಗೆ ಬಿದ್ದು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ, ಪ್ರಯಾಣಿಕರಲ್ಲಿ ಮೂವರು ಮಕ್ಕಳಿಗೆ ಗಾಯವಾಗಿರುವ ಘಟನೆ ಅಮ್ಮುಂಜೆಯಲ್ಲಿ ನಿನ್ನೆ ಮದ್ಯ ರಾತ್ರಿ ವೇಳೆ ನಡೆದಿದೆ.
ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಗಾಣೆಮಾರ್ ಎಂಬಲ್ಲಿ ಅಪಘಾತ ನಡೆದಿದ್ದು. ರಿಕ್ಷಾ ಚಾಲಕ ಅಮ್ಮುಂಜೆ ನಿವಾಸಿ ಮಹಾಬಲ ಪೂಜಾರಿ (37) ಮೃತಪಟ್ಟ ಅವಿವಾಹಿತ ಯುವಕನಾಗಿದ್ದಾನೆ.
ಈತನ ಸಂಬಂಧಿ ಮಕ್ಕಳಾದ ತುಷಾರ್.ಭವಿತ್ ಮತ್ತು ಪ್ರದೀಪ್ ಅವರನ್ನು ಮೂಡಬಿದರೆಯ ಮಿಜಾರು ಎಂಬಲ್ಲಿಗೆ ಜಾತ್ರೆಗೆ ಹೋಗಿ ವಾಪಸು ಮನೆಗೆ ಬರುವ ವೇಳೆ ಘಟನೆ ನಡೆದಿದೆ.
ಮನೆಗೆ ಸುಮಾರು 500 ಮೀ ದೂರದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಚಾಲಕನ ನಿಯಂತ್ರಣ ಕಳೆದ ರಿಕ್ಷಾ ತಲೆಕೆಳಗಾದ ಸ್ಥಿತಿಯಲ್ಲಿ ಚರಂಡಿಗೆ ಬಿದ್ದಿದೆ. ಚಾಲಕ ರಿಕ್ಷಾ ದ ಅಡಿಯಲ್ಲಿ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
























