ಬಂಟ್ವಾಳ: ಮಣಿಹಳ್ಳ-ಮಾವಿನಕಟ್ಟೆ ರಸ್ತೆಯ ಮಣಿನಾಲ್ಕೂರು ಗ್ರಾಮದ ಎರ್ಮಳದಲ್ಲಿ ಸ್ಕೂಟರೊಂದಕ್ಕೆ ಎದುರಿನಿಂದ ಆಗಮಿಸಿದ ಕಾರೊಂದು ಢಿಕ್ಕಿಯಾಗಿ ಸ್ಕೂಟರ್ ಸವಾರ ಸರಪಾಡಿ ಕಳ್ಕೊಟ್ಟೆ ನಿವಾಸಿ ಸುಂದರ ಬಾಬು ಶೆಟ್ಟಿ ಗಂಭೀರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.
ಅವರು ರಾತ್ರಿ 9.50ರ ಸುಮಾರಿಗೆ ಪೆರಿಯಪಾದೆ ದೈವಸ್ಥಾನಕ್ಕೆ ಹೋಗಿ ಹರಕೆ ಸಲ್ಲಿಸಿ ವಾಪಸ್ಸು ತನ್ನ ಮನೆಗೆ ಸರಪಾಡಿ ಕಡೆಗೆ ತೆರಳುತ್ತಿರುವ ಸಂದರ್ಭ ಕಾರು ಚಾಲಕನಾದ ದಿನಕರ ಎಂಬಾತನು ತನ್ನ ಕಾರನ್ನು ದುಡುಕತನ ಹಾಗೂ ನಿರ್ಲಕ್ಷತನದಿಂದ ಚಾಲಯಿಸಿಕೊಂಡು ರಸ್ತೆಯ ತೀರ ಬಲ ಬದಿಗೆ ಬಂದು ಸುಂದರ ಅವರ ಸ್ಕೂಟರಿಗೆ ಎದುರುಗಡೆಯಿಂದ ಡಿಕ್ಕಿ ಪಡಿಸಿದ ಪರಿಣಾಮ ಅವರು ಸ್ಕೂಟರ್ ಸಮೇತ ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡಿದ್ದರು.
ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಒಂದು ವಾರಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾದರೂ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ (ಫೆ.19) ಮೃತಪಟ್ಟಿದ್ದಾರೆ. ಪಾಣೆ ಮಂಗಳೂರು ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.