ಅಪರಾಧ

ಧರ್ಮಸ್ಥಳ ಪಾದಯಾತ್ರೆ: ಬಸ್ ಡಿಕ್ಕಿಯಾಗಿ ಇಬ್ಬರು ಯಾತ್ರಿಕರ ಸಾವು!

GL
ಧರ್ಮಸ್ಥಳಕ್ಕೆ (Dharmasthala) ಪಾದಯಾತ್ರೆಯಲ್ಲಿ     ತೆರಳುತ್ತಿದ್ದ ಪಾದಚಾರಿಗಳ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಹಾಸನ (Hassan) ತಾಲೂಕಿನ ಕೆಂಚಟ್ಟಹಳ್ಳಿ ಬಳಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಧರ್ಮಸ್ಥಳಕ್ಕೆ (Dharmasthala) ಪಾದಯಾತ್ರೆಯಲ್ಲಿ     ತೆರಳುತ್ತಿದ್ದ ಪಾದಚಾರಿಗಳ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಹಾಸನ (Hassan) ತಾಲೂಕಿನ ಕೆಂಚಟ್ಟಹಳ್ಳಿ ಬಳಿ ನಡೆದಿದೆ.

chennai-shopping
maithri

ಸುರೇಶ್ (60), ಕುಮಾರ್ (55) ಮೃತ ದುರ್ದೈವಿಗಳು. ಮೃತರು ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಆನಗೋಳು ಗ್ರಾಮದವರು. ಘಟನೆಯಲ್ಲಿ ಗಂಭೀರ ಗಾಯಗೊಂಡ ದಿನೇಶ್‌ಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇಂದು ಮುಂಜಾನೆ ಧರ್ಮಸ್ಥಳಕ್ಕೆ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬಸ್ ಡಿಕ್ಕಿ ಹೊಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಂತಿಗ್ರಾಮ ಪೊಲೀಸ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 105