Gl jewellers
ಅಪರಾಧ

ಬಂಟ್ವಾಳ: ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಕಾರು; ಹೊಡೆತದ ರಭಸಕ್ಕೆ ವೃದ್ದೆ ಮೃತ್ಯು, ಮತ್ತೋರ್ವರಿಗೆ ಗಂಭೀರ!!

ಕಾರು ಚಾಲಕಿಯ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಮೃತಪಟ್ಟಿದ್ದು, ಮತ್ತೋರ್ವ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕು ಚೆನ್ನೈತ್ತೋಡಿ ಗ್ರಾಮದ ಪಾಲೆದಮರ ಎಂಬಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ಕಾರು ಚಾಲಕಿಯ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಮೃತಪಟ್ಟಿದ್ದು, ಮತ್ತೋರ್ವ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕು ಚೆನ್ನೈತ್ತೋಡಿ ಗ್ರಾಮದ ಪಾಲೆದಮರ ಎಂಬಲ್ಲಿ ನಡೆದಿದೆ.

Papemajalu garady
Karnapady garady

ಫೆ. 23 ರಂದು ಸಂಜೆ ವೇಳೆ ಬಂಟ್ವಾಳ ತಾಲೂಕು, ಚೆನ್ನೈತ್ತೋಡಿ ಗ್ರಾಮದ, ಪಾಲೆದಮರ ಎಂಬಲ್ಲಿ KA21M8167 ನೇ ನೊಂದಣಿ ಸಂಖ್ಯೆಯ ಕಾರನ್ನು ಚಾಲಕಿ ಶೋಭಾ ಎಂಬವರು ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ, ಚಾಲಕಿಯ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿ, ಅಂಗಡಿಗೆ ಬಂದಿದ್ದ ಗ್ರಾಹಕರಾದ ಲೂಯಿಸ್ ಡಿಕೋಸ್ತ ರವರಿಗೆ ಡಿಕ್ಕಿ ಹೊಡೆದು, ಬಳಿಕ ಅಂಗಡಿಯ ಬಳಿ ಕುಳಿತಿದ್ದ ಗಣೇಶ್ ಮಲ್ಯರವರ ಅಜ್ಜಿ ಸುಮತಿರವರಿಗೆ ಡಿಕ್ಕಿ ಹೊಡೆದಿರುತ್ತದೆ. ಪರಿಣಾಮ ಸುಮತಿ ರವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿ ರಾತ್ರಿ ವೇಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುತ್ತಾರೆ.

ಅಪಘಾತದಿಂದ ಲೂಯಿಸ್ ಡಿಕೋಸ್ತರವರು ಗಾಯಗೊಂಡಿರುತ್ತಾರೆ ಹಾಗೂ ದ್ವಿಚಕ್ರ ವಾಹನ KA19EJ9797 ಮುಂಭಾಗ ಜಖಂಗೊಂಡಿರುತ್ತದೆ. ಈ ಬಗ್ಗೆ ಗಣೇಶ್ ಮಲ್ಯರವರ ದೂರಿನಂತೆ ಪುಂಜಾಲಕಟ್ಟೆ ಪೊಲೀಸ್   ಠಾಣೆಯಲ್ಲಿ 517/2025 00: 281 125A 106 BNS- 2023 ರಂತೆ ಪ್ರಕರಣ ದಾಖಲಾಗಿರುತ್ತದೆ


ಈ ಸುದ್ದಿಯನ್ನು ಶೇರ್ ಮಾಡಿ

Related Posts

ತಾಯಿ‌ ಶವದ ಮುಂದೆ ದುಡ್ಡಿಗಾಗಿ ಕಿತ್ತಾಡಿಕೊಂಡ ಮಕ್ಕಳು! ರಾತ್ರಿ ಪೂರ್ತಿ ಠಾಣೆ ಮುಂಭಾಗವೇ ಶವವಿಟ್ಟ ಅಮಾನವೀಯ ಘಟನೆ!!

ಹಣಕ್ಕಾಗಿ ತಾಯಿಯ ಶವ ಹೂಳಲು ಅವಕಾಶ ನೀಡದಿರುವ ಅಮಾನವೀಯ ಘಟನೆ ಚಿಕ್ಕಬಳ್ಳಾಪುರದ ದೊಡ್ಡಕುರುಗೂಡು…