ಅಪರಾಧ

ದ್ವಿಚಕ್ರ ವಾಹನ ಡಿಕ್ಕಿ, ಪಾದಚಾರಿ ಮಹಿಳೆ ಮೃತ್ಯು!

ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ದ್ವಿಚಕ್ರ ವಾಹನ ಡಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಬಿ.ಸಿ.ರೋಡಿನ ಎಲೈಸಿ ಕಚೇರಿ ಮುಂಭಾಗ ಸೋಮವಾರ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ದ್ವಿಚಕ್ರ ವಾಹನ ಡಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಬಿ.ಸಿ.ರೋಡಿನ ಎಲೈಸಿ ಕಚೇರಿ ಮುಂಭಾಗ ಸೋಮವಾರ ನಡೆದಿದೆ.

akshaya college

ಉಪ್ಪಿನಂಗಡಿಗೆ (Uppinangady) ತೆರಳಲು ರಸ್ತೆ ದಾಟುತ್ತಿದ್ದ ಉಪ್ಪಿನಂಗಡಿ ಸಮೀಪದ ನಟ್ಟಿಬೈಲು ಎಂಬಲ್ಲಿನ ನಿವಾಸಿ ಕೆ.ಸುದಾರಾಮ ಅವರ ಪತ್ನಿ ಸರಸ್ವತಿ (50) ಅವರಿಗೆ ಸ್ಕೂಟರ್ ಒಂದು ಡಿಕ್ಕಿ ಹೊಡೆದಿದೆ. ಈ ವೇಳೆ ತಲೆಯ ಭಾಗಕ್ಕೆ ಗಾಯಗಳಾಗಿದ್ದು, ಕೂಡಲೇ ಅವರನ್ನು ಸಮೀಪದ ತುಂಬೆಯಲ್ಲಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಲ್ಲಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಆದರೆ ರಾತ್ರಿ ವೇಳೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟರು. ಪತಿ ಎಲೈಸಿ ಏಜೆಂಟ್ ಆಗಿದ್ದು, ಕಚೇರಿಯಲ್ಲಿ ಕಾರ್ಯಕ್ರಮವೊಂದು ಇದ್ದ ಕಾರಣ ಇವರು ಬಂದಿದ್ದರು ಎನ್ನಲಾಗಿದೆ. ಈ ಬಗ್ಗೆ ಪಾಣೆಮಂಗಳೂರಿನ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts