Gl
ಅಪರಾಧ

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾರು ಅಪಘಾತ; ಚಾಲಕನಿಗೆ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಸೇರಿದ ಕಾರು ಅಪಘಾತಕ್ಕೀಡಾಗಿದ್ದು ಚಿಕ್ಕಮಗಳೂರು ಬಳಿ ಲಕ್ಯ ಕ್ರಾಸ್ ನಲ್ಲಿ ಲಾರಿ ಡಿಕ್ಕಿಯಾಗಿದೆ ಎನ್ನಲಾಗಿದೆ.

rachana_rai
Pashupathi

ವಿಜಯೇಂದ್ರ ಅವರು ಫೆಬ್ರವರಿ 28ರಂದು ಚಿಕ್ಕಮಗಳೂರಿನಲ್ಲಿ ಬಸವ ತತ್ವ ಕಾರ್ಯಕ್ರಮ ಮುಗಿಸಿ ವಾಪಸ್ ಚಿಕ್ಕಮಗಳೂರು ನಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಹಿಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಇನ್ನು ಅದೃಷ್ಟವಶಾತ್ ವಿಜಯೇಂದ್ರ ಅವರು ಬೇರೊಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದರಿಂದ ಬಚಾವ್‌ ಆಗಿದ್ದಾರೆ.

akshaya college

ವಿಜಯೇಂದ್ರಗೆ ಸೇರಿದ ಕಾರಿನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಬೀರೂರು ಮೂಲದ ಹರೀಶ್ ಎಂಬುವರಿಗೆ ಸೇರಿದ ಲಾರಿ ಮರದ ಪೀಸ್ ತುಂಬಿಕೊಂಡು ಚಿಕ್ಕಮಗಳೂರು ನಗರದಿಂದ ಮುಂಬಯಿಗೆ ತೆರಳುತ್ತಿತ್ತು. ಸದ್ಯ ಪೊಲೀಸರು ಕಾರು ಸೇರಿದಂತೆ ಲಾರಿಯನ್ನು ಸಹ ಗ್ರಾಮಾಂತರ ಠಾಣೆಗೆ ತೆಗೆದುಕೊಂಡು ಹೋಗಿದ್ದು, ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲು ಸಿದ್ಧತೆ ನಡೆಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts