ಅಪರಾಧ

ಪೆರಿಯತ್ತೋಡಿ:ಆಟೋ ಚಾಲಕ ಆತ್ಮಹತ್ಯೆ!

ಪೆರಿಯತ್ತೋಡಿ ನಿವಾಸಿಯಾದ ಆಟೋ ಚಾಲಕನೋರ್ವ ಮನೆಯ ಬಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು : ಪೆರಿಯತ್ತೋಡಿ ನಿವಾಸಿಯಾದ ಆಟೋ ಚಾಲಕನೋರ್ವ ಮನೆಯ ಬಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ನಡೆದಿದೆ.

akshaya college

ಪೆರಿಯತ್ತೋಡಿ ದಿ.ಹುಕ್ರಪ್ಪ ಗೌಡ ಅವರ ಪುತ್ರ ಕೃಷ್ಣ(40)ರವರು ಆತ್ಮಹತ್ಯೆ ಮಾಡಿಕೊಂಡವರು ಎನ್ನಲಾಗಿದೆ.

ಬೆಳಿಗ್ಗೆ ಅವರು ರಿಕ್ಷಾದಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ದಿದ್ದರು. ಮಧ್ಯಾಹ್ನದ ವೇಳೆ ಸಾಲ ವಸೂಲಿಗಾರರ ಕರೆ ಬಂದಿತ್ತು. ಅದಾದ ಬಳಿಕ ಮೃತ ಕೃಷ್ಣ ಅವರು ಮನೆಯ ಬಳಿಯ ಮರವೊಂದರ ಗೆಲ್ಲಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಸಹೋದರರಾದ ಕುಶಾಲಪ್ಪ, ರಿಕ್ಷಾ ಚಾಲಕ ಶಿವರಾಮ, ಹರೀಶ್ ಮತ್ತು ಮೂವರು ಸಹೋದರಿಯರನ್ನು ಅಗಲಿದ್ದಾರೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts