Gl jewellers
ಅಪರಾಧ

ಮಣಿಪಾಲದಲ್ಲಿ ಬೆಂಗಳೂರಿನ ಕುಖ್ಯಾತ ಪಾತಕಿಯ ಬಂಧನ! ಕಾರ್ಯಾಚರಣೆ ವೇಳೆ ಸರಣಿ ಅಪಘಾತ ನಡೆಸಿದ ಆರೋಪಿ!!

ಉಡುಪಿ:-ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಸರಣಿ ಅಪಘಾತವಾಗಿ ಹಲವು ವಾಹನಗಳಿಗೆ ಹಾನಿ ಸಂಭವಿಸಿದೆ ಆರೋಪಿ ಸೆರೆಯಾಗಿದ್ದಾನೆ.

ಈ ಸುದ್ದಿಯನ್ನು ಶೇರ್ ಮಾಡಿ

ಕುಖ್ಯಾತ ಪಾತಕಿ ಇಸಾಕ್ ಎಂಬಾತನನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಸೆರೆ ಹಿಡಿದಿದ್ದಾರೆ.

Papemajalu garady
Karnapady garady

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ಘಟನೆ ನಡೆದಿದೆ.

ನೆಲಮಂಗಲ ಪೊಲೀಸರನ್ನು ಕಂಡು ಕಾರಿನಲ್ಲಿ ಪರಾರಿಯಾಗಲು ಆರೋಪಿ ಯತ್ನಿಸಿದ್ದ. ಬೆಂಬಿಡದೆ ಪೊಲೀಸರು ಚೇಸ್ ಮಾಡಿದ್ದಾರೆ. ತಕ್ಷಣ ಮಣಿಪಾಲ ಪೊಲೀಸರಿಗೆ ನೆಲಮಂಗಲ ಪೊಲೀಸರು ಮಾಹಿತಿ ನೀಡಿದ್ದಾರೆ.

ತಕ್ಷಣ ಕಾರ್ಯಪ್ರವೃತ್ತರಾದ ಮಣಿಪಾಲ ಪೊಲೀಸ್‌ ಇನ್‌ಸ್ಪೆಕ್ಟರ್ ದೇವರಾಜ್, ಮಣಿಪಾಲ ಬಳಿ ಪಾತಕಿಯನ್ನು ಬಂಧಿಸಿದ್ದಾರೆ.

ಪೊಲೀಸರು ಬೆನ್ನಟ್ಟುವ ವೇಳೆ ನಾಲ್ಕು ಕಾರು ಹಾಗೂ ಒಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ್ದ. ಕೊನೆಗೆ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಾರಿನಲ್ಲಿ ಆರೋಪಿ ಜೊತೆ ಓರ್ವ ಯುವತಿ ಪತ್ತೆಯಾಗಿದ್ದಾಳೆ. ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ತಾಯಿ‌ ಶವದ ಮುಂದೆ ದುಡ್ಡಿಗಾಗಿ ಕಿತ್ತಾಡಿಕೊಂಡ ಮಕ್ಕಳು! ರಾತ್ರಿ ಪೂರ್ತಿ ಠಾಣೆ ಮುಂಭಾಗವೇ ಶವವಿಟ್ಟ ಅಮಾನವೀಯ ಘಟನೆ!!

ಹಣಕ್ಕಾಗಿ ತಾಯಿಯ ಶವ ಹೂಳಲು ಅವಕಾಶ ನೀಡದಿರುವ ಅಮಾನವೀಯ ಘಟನೆ ಚಿಕ್ಕಬಳ್ಳಾಪುರದ ದೊಡ್ಡಕುರುಗೂಡು…