pashupathi
ಅಪಘಾತ

ಏರ್ ಪೋರ್ಟ್ ಶೌಚಾಲಯದ ಕಸದ ಬುಟ್ಟಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!!

tv clinic
ವಿಮಾನ ನಿಲ್ದಾಣದ ಶೌಚಾಲಯದ ಕಸದ ಬುಟ್ಟಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮುಂಬೈ: ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಶೌಚಾಲಯದ ಕಸದ ಬುಟ್ಟಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿದೆ.

akshaya college

ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಕೂಡಲೇ ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದರು. ಶಿಶುವನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಲ್ಲಿ ವೈದ್ಯರು ಮಗು ಮೃತಪಟ್ಟಿರುವುದಾಗಿ ದೃಢಪಡಿಸಿದರು.

ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ನವಜಾತ ಶಿಶುವನ್ನು ಕಸದ ಬುಟ್ಟಿಗೆ ಎಸೆದವರನ್ನು ಪತ್ತೆಹಚ್ಚಲು ಅಧಿಕಾರಿಗಳು ವಿಮಾನ ನಿಲ್ದಾಣದ ಆವರಣದಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts