pashupathi
ಅಪಘಾತ

ಬೆಳ್ತಂಗಡಿ: ಭಾಗವತ ಸತೀಶ್ ಆಚಾರ್ಯ ಬೈಕ್‌ ಅಪಘತದಲ್ಲಿ  ಮೃತ್ಯು..!

tv clinic
ಬೈಕ್‌ಗಳ ಅಪಘಾತದಲ್ಲಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಅಂಡಿಂಜೆಯ ಕಿಲಾರ ಮಾರಿಕಾಂಭ ದೇವಸ್ನಾನದ ತಿರುವು ರಸ್ತೆಯಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ಬೈಕ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಅಂಡಿಂಜೆಯ ಕಿಲಾರ ಮಾರಿಕಾಂಭ ದೇವಸ್ನಾನದ ತಿರುವು ರಸ್ತೆಯಲ್ಲಿ ನಡೆದಿದೆ.

akshaya college

ಮೃತಪಟ್ಟ ವ್ಯಕ್ತಿಯನ್ನು ಅಂಡಿಂಜೆ ಗ್ರಾಮದ ಪಿಯೂಲಿರು ನಿವಾಸಿ ಯಕ್ಷಗಾನ ಭಾಗವತ ಸತೀಶ್ ಆಚಾರ್ಯ ಅಂಡಿಂಜೆ (40) ಎಂದು ಗುರುತಿಸಲಾಗಿದೆ.

ಮಂಗಳಾದೇವಿ ಯಕ್ಷಗಾನ ಮೇಳದ ಯಕ್ಷಗಾನ ಭಾಗವತರಾದ ಸತೀಶ್ ಆಚಾರ್ಯ ರವರು ಮಾ. 31ರಂದು ಸುಳ್ಯದಲ್ಲಿ ನಡೆದ ಯಕ್ಷಗಾನ ಕಾರ್ಯಕ್ರಮವನ್ನು ಮುಗಿಸಿ ಮುಂಜಾನೆ 4 ಗಂಟೆಗೆ ಅವರು ತಮ್ಮ ಬೈಕ್‌ನಲ್ಲಿ ನಾರಾವಿಯಿಂದ ಅಂಡಿಂಜೆಗೆ ಬರುತ್ತಿರುವ ಸಂದರ್ಭದಲ್ಲಿ ಅಂಡಿಂಜೆ ಕಿಲಾರ ಮಾರಿಗುಡಿ ದೇವಸ್ಥಾನದ ಸಮೀಪದ ತಿರುವು ರಸ್ತೆಯಲ್ಲಿ ಎದುರಿನಿಂದ ಬರುತ್ತಿದ್ದ ಬೈಕ್ ಹಾಗೂ ಇವರು ಹೋಗುತ್ತಿದ್ದ ಬೈಕ್ ಪರಸ್ಪರ ಡಿಕ್ಕಿ ಹೊಡೆದುಕೊಂಡು ಈ ದುರ್ಘಟನೆ ನಡೆದಿದೆ. ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟರು. ಎದುರಿನಿಂದ ಬರುತ್ತಿದ್ದ ಬೈಕ್‌ನಲ್ಲಿದ್ದವರಿಗೂ ಗಾಯವಾಗಿದೆ ಎಂದು ತಿಳಿದು ಬಂದಿದೆ.

ಮೃತರು ತಾಯಿ, ಸಹೋದರಿ ಸಹೋದರ ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ. ಈ ಬಗ್ಗೆ ವೇಣೂರು ಪೋಲಿಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts