ಎರಡು ಗೂಡ್ಸ್ ರೈಲುಗಳು ಮುಖಾಮುಖಿ ಢಿಕ್ಕಿ ಹೊಡೆದು, ಇಬ್ಬರು ಲೋಕೋ ಪೈಲೆಟ್ ಗಳು ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಜಾರ್ಖಂಡ್ ನ ಸಾಹೇಬ್ ಗಂಜ್ ಜಿಲ್ಲೆಯಲ್ಲಿ ಇಂದು (ಮಂಗಳವಾರ,ಎ.01) ಮುಂಜಾನೆ ನಡೆದಿದೆ.
ಬೆಳಗಿನ ಜಾವ 3:00 ಗಂಟೆ ಸುಮಾರಿಗೆ ಬರ್ಹೈಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ(NTPC) ಡಿಕ್ಕಿ ಹೊಡೆದ ಗೂಡ್ಸ್ ರೈಲುಗಳನ್ನು ನಿರ್ವಹಿಸುತ್ತಿತ್ತು, ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಿಸಲು ಈ ರೈಲು ಮಾರ್ಗವನ್ನು ಬಳಸಲಾಗುತ್ತಿತ್ತು ಎನ್ನಲಾಗಿದೆ.
ಅಪಘಾತ ಸಂಭವಿಸಿದ ರೈಲು ಮಾರ್ಗವು ಬಿಹಾರದ ಭಾಗಲ್ಪುರ್ ಜಿಲ್ಲೆಯ ಎನ್ ಟಿಪಿಸಿಯ ಕಹಲ್ ಗಾಂವ್ ಸೂಪರ್ ಥರ್ಮಲ್ ಪವರ್ ಸ್ಟೇಷನ್ ಮತ್ತು ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಫರಕ್ಕಾ ವಿದ್ಯುತ್ ಸ್ಥಾವರದ ನಡುವೆ ಸಂಪರ್ಕ ಕಲ್ಪಿಸುತ್ತದೆ.
“ಎರಡೂ ಸರಕು ರೈಲುಗಳ ಲೋಕೊ ಪೈಲೆಟ್ ಗಳು ರೈಲು ಅಪಘಾತದಲ್ಲಿ ಮೃತಪಟ್ಟಿದ್ದಾರೆ” ಎಂದು ಸಾಹೇಬ್ ಗಂಜ್ ನ ಉಪ-ವಿಭಾಗೀಯ ಪೊಲೀಸ್ ಅಧಿಕಾರಿ ಕಿಶೋರ್ ಟಿರ್ಕಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ರೈಲುಗಳ ಮುಖಾಮುಖಿ ಢಿಕ್ಕಿಯಲ್ಲಿ ಇಬ್ಬರು ಲೋಕೋ ಪೈಲೆಟ್ ಗಳು ಸಾವು..!
ನಾಲ್ವರಿಗೆ ಗಾಯ..!