Gl
ಅಪಘಾತ

ವಿದ್ಯುತ್ ತಂತಿ ಸ್ಪರ್ಶಿಸಿ ಕಾರ್ಮಿಕ ಮೃತ್ಯು!!

GL
ಮರದ ಗೆಲ್ಲು ಕಡಿಯುತ್ತಿರುವಾಗ ಆಕಸ್ಮಿಕವಾಗಿ ವಿದ್ಯುತ್‌ ತಂತಿ ಮೇಲೆ ಬಿದ್ದು ವಿದ್ಯುತ್ ಶಾಕ್ ತಗಲಿ ಗೆಲ್ಲು ಕಡಿಯುತ್ತಿದ್ದ ಕಾರ್ಮಿಕ ಮೃತಪಟ್ಟ ದಾರುಣ ಘಟನೆ ಪುಂಡಿಕ್ಕು ಎಂಬಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ:  ಹುಣ್ಸೆಕಟ್ಟೆ ಸಮೀಪದ ಪುಂಡಿಕ್ಕು ಎಂಬಲ್ಲಿ ಮರದ ಗೆಲ್ಲು ಕಡಿಯುತ್ತಿರುವಾಗ ಆಕಸ್ಮಿಕವಾಗಿ ವಿದ್ಯುತ್‌ ತಂತಿ ಮೇಲೆ ಬಿದ್ದು ವಿದ್ಯುತ್ ಶಾಕ್ ತಗಲಿ ಗೆಲ್ಲು ಕಡಿಯುತ್ತಿದ್ದ ಕಾರ್ಮಿಕ ಮೃತಪಟ್ಟ ದಾರುಣ ಘಟನೆ ಪುಂಡಿಕ್ಕು ಎಂಬಲ್ಲಿ ನಡೆದಿದೆ.

core technologies

ಬೆಳ್ತಂಗಡಿ ತಾಲೂಕಿನ ಕಸಬಾ ಗ್ರಾಮದ ಪುಂಡಿಕ್ಕು ಎಂಬಲ್ಲಿ ಚನನ ಗೌಡ (೬೯ವ) ಎಂಬವರು ಇಂದು ಬೆಳಿಗ್ಗೆ ಮೆಸ್ಕಾಂ ಇಲಾಖೆಯ ಅನುಮತಿ ಪಡೆಯದೇ, ಖಾಸಗಿ ಜಮೀನಿನಲ್ಲಿ ಇರುವ ಮರದ ಗೆಲ್ಲು ಕಡಿಯುವಾಗ, ಗೆಲ್ಲು ಆಕಸ್ಮಿಕವಾಗಿ, ಅಲ್ಲಿಯೇ ರಸ್ತೆಯಲ್ಲಿ ಹಾದು ಹೋಗಿರುವ ೧೧ಕೆವಿ ಕುವೆಟ್ಟು ಫೀಡರ್‌ನ ಹೆಚ್.ಟಿ ಲೈನ್‌ಗೆ ಬಿದ್ದು ಈ ಘಟನೆ ನಡೆದಿದೆ. ಗೆಲ್ಲು ತಂತಿ ಮೇಲೆ ಬಿದ್ದುದರಿಂದ ವಿದ್ಯುತ್ ಶಾಕ್ ತಗಲಿ, ಮರದಿಂದ ಕೆಳಗೆ ಬಿದ್ದಿದ್ದು, ಕೂಡಲೇ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಯಿತು. ಅಲ್ಲಿಯ ವೈದ್ಯರು ತಪಾಸಣೆ ನಡೆಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದು ಕೊಂಡು ಹೋಗಲು ತಿಳಿಸಿದ್ದು, ಅದರಂತೆ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಅವರು ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts