Gl harusha
ಅಪಘಾತ

ಬಾವಿಗೆ ಬಿದ್ದವನ ರಕ್ಷಣೆಗೆ ಧಾವಿಸಿದ ಜನ: ಉಸಿರುಗಟ್ಟಿ 8 ಮಂದಿ ದುರ್ಮರಣ!

ಬಾವಿಗೆ ಬಿದ್ದ ಒಬ್ಬನನ್ನು ರಕ್ಷಣೆ ಮಾಡಲು ಒಬ್ಬರಾದ ಮೇಲೆ ಒಬ್ಬರಂತೆ  ಒಟ್ಟು ಏಳು ಹೋಗಿ ಎಂಟು ಜನ ಉಸಿರುಗಟ್ಟಿ ಸಾವಿಗೀಡಾದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬಾವಿಗೆ ಬಿದ್ದ ಒಬ್ಬನನ್ನು ರಕ್ಷಣೆ ಮಾಡಲು ಒಬ್ಬರಾದ ಮೇಲೆ ಒಬ್ಬರಂತೆ  ಒಟ್ಟು ಏಳು ಮಂದಿ ಹೋಗಿ, ಎಂಟು ಜನರೂ ಉಸಿರುಗಟ್ಟಿ ಸಾವಿಗೀಡಾದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

srk ladders
Pashupathi
Muliya

ಖಂಡ್ವಾ ಜಿಲ್ಲೆಯ ಕೊಂಡಾವತ್ ಗ್ರಾಮದ ಗಂಗೌರ್‌ ಹಬ್ಬದ ಆಚರಣೆ ನಡೆಯುತ್ತಿತ್ತು. ಇದೀಗ ಈ ಗ್ರಾಮ ಶೋಕ ಸಾಗರದಲ್ಲಿ ಮುಳುಗಿದೆ.

ಗಂಗೌರ ಹಬ್ಬದ ಆಚರಣೆಯ ಭಾಗವಾಗಿ ನೀರಿನಲ್ಲಿ ಮುಳುಗುವುದಕ್ಕಾಗಿ ಬಾವಿ ಸ್ವಚ್ಛ ಮಾಡುವ ಕೆಲಸದಲ್ಲಿ ತೊಡಗಿದ್ದ ಸಂದರ್ಭದಲ್ಲಿ ಈ ದುರಂತ ನಡೆದಿದೆ. ಬಾವಿ ಸ್ವಚ್ಛಗೊಳಿಸುವ ವೇಳೆ ಹಗ್ಗ ತುಂಡಾಗಿ ಮಧ್ಯಾಹ್ನ ವೇಳೆ ಒಬ್ಬ ಯುವಕ ಬಾವಿಗೆ ಬಿದ್ದಿದ್ದಾನೆ. ಆತನಿಗೆ ಮೇಲೆ ಬರಲು ಆಗಲಿಲ್ಲ. ಇದನ್ನು ಕಂಡು ಒಬ್ಬೊಬ್ಬರಾಗಿ ಏಳು ಮಂದಿ ರಕ್ಷಣೆಗೆ ಇಳಿದಿದ್ದು, ಸಾವಿಗೀಡಾಗಿದ್ದಾರೆ. ವಿಷಾನಿಲದಿಂದ ಉಸಿರುಗಟ್ಟಿ ಈ ಸರಣಿ ಸಾವು ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.

ದುರಂತದಲ್ಲಿ ಮೃತರಾದವರನ್ನು ರಾಕೇಶ್, ವಾಸುದೇವ್, ಅರ್ಜುನ್, ಗಜಾನಂದ್, ಮೋಹನ್, ಅಜಯ್, ಶರಣ್ ಮತ್ತು ಅನಿಲ್ ಎಂದು ಗುರುತಿಸಲಾಗಿದೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಖಾಂಡ್ವಾ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಸಂತ್ರಸ್ತ ಯುವಕರ ಕುಟುಂಬ ಸದಸರಿಗೆ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts