ಅಪಘಾತ

ಸ್ಕೂಟಿಗಳ ನಡುವೆ ಭೀಕರ ಅಪಘಾತ- ಸವಾರ ಮೃತ್ಯು!!

ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಏ. 4 ಸಂಜೆ ಉಡುಪಿಯ ಬ್ರಹ್ಮಾವರ ತಾಲೂಕಿನ ಪೇತ್ರಿ ಜಂಕ್ಷನ್ ಬಳಿ ಸಂಭವಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬ್ರಹ್ಮಾವರ: ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಏ. 4 ಸಂಜೆ ಉಡುಪಿಯ ಬ್ರಹ್ಮಾವರ ತಾಲೂಕಿನ ಪೇತ್ರಿ ಜಂಕ್ಷನ್ ಬಳಿ ಸಂಭವಿಸಿದೆ.

ಬೈಕ್‌ ಸವಾರ ಸಾಸ್ತಾನ, ಐರೋಡಿ ಗೋಳಿಬೆಟ್ಟು ನಿವಾಸಿ ದೀಕ್ಷಿತ್ (24) ಮೃತ ಯುವಕ ಎಂದು ಗುರುತಿಸಲಾಗಿದೆ. ಸಹ ಸವಾರ ಅಭಿಷೇಕ್ ಗಂಭೀರ ಗಾಯಗೊಂಡಿದ್ದು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬ್ರಹ್ಮಾವರದಿಂದ ಕುಕ್ಕೆಹಳ್ಳಿ ಕಡೆಗೆ ಹೋಗುವ ಸಲುವಾಗಿ ಪೇತ್ರಿ ಜಂಕ್ಷನ್‌ನಲ್ಲಿ ಬಲಕ್ಕೆ ತಿರುಗುವ ವೇಳೆ ಹೆಬ್ರಿ ಕಡೆಯಿಂದ ಬ್ರಹ್ಮಾವರಕ್ಕೆ ಹೋಗುತ್ತಿದ್ದ ಸ್ಕೂಟರಿಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರರಿಬ್ಬರೂ ರಸ್ತೆಗೆ ಅಪ್ಪಳಿಸಿ ತಲೆಗೆ ಗಂಭೀರ ಗಾಯಗಳಾಗಿದ್ದು, ಸವಾರ ದೀಕ್ಷಿತ್ ಮೃತಪಟ್ಟಿದ್ದು ಸಹಸವಾರ ಅಭಿಷೇಕ್ ಗಂಭೀರ ಗಾಯಗೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts