ಅಪಘಾತ

SSLC  ಉತ್ತರ ಪತ್ರಿಕೆ ಒಯ್ಯುತ್ತಿದ್ದ ವಾಹನ ಪಲ್ಟಿ!

ಎಸ್ಸೆಸ್ಸೆಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಟಿಟಿ ವಾಹನ ಡಿವೈಡರ್‌ಗೆ ಡಿಕ್ಕಿಯಾಗಿ ನಿಯಂತ್ರಣ ತಪ್ಪಿ ಪಲ್ಟಿ

ಈ ಸುದ್ದಿಯನ್ನು ಶೇರ್ ಮಾಡಿ

ಎಸ್ಸೆಸ್ಸೆಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಟಿಟಿ ವಾಹನ ಡಿವೈಡರ್‌ಗೆ ಡಿಕ್ಕಿಯಾಗಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಹಾವೇರಿಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಟೋಲ್ ಸಮೀಪ ಭಾನುವಾರ ನಡೆದಿದೆ.

akshaya college

ಟಿಟಿ ವಾಹನ ರಾಯಚೂರು, ಯಾದಗಿರಿ, ಬೀದ‌ರ್, ಬಾಗಲಕೋಟೆ, ಧಾರವಾಡ ಜಿಲ್ಲೆಗಳ ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಲೋಡ್ ಮಾಡಿಕೊಂಡು ಹಾವೇರಿ ಮಾರ್ಗವಾಗಿ ಬೆಂಗಳೂರಿಗೆ ಸಾಗುತ್ತಿತ್ತು. ಬಂಕಾಪುರ ಟೋಲ್ ಬಳಿ ಮುಂದೆ ಹೋಗುತ್ತಿದ್ದ ವಾಹನವನ್ನು ಓವರ್‌ಟೆಕ್ ಮಾಡಲು ಹೋದಾಗ ಈ ಘಟನೆ ಸಂಭವಿಸಿದೆ. ಉತ್ತರ ಪತ್ರಿಕೆ ಬಂಡಲ್‌ಗಳನ್ನು ಸುರಕ್ಷಿತವಾಗಿ ಬೇರೆ ವಾಹನದಲ್ಲಿ ಬೆಂಗಳೂರು ಪ್ರೌಢ ಶಾಲಾ ಬೋರ್ಡ್‌ಗೆ ಕಳುಹಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts