ಬೆಳ್ತಂಗಡಿ: ನಾರಾವಿ ಕುತ್ತೂರಿನಲ್ಲಿ ಸಂಭವಿಸಿದ ಭೀಕರ ಬೈಕ್ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ ಸಂಭವಿಸಿದೆ.
ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದವರನ್ನು ಪ್ರಶಾಂತ್ ಹಾಗೂ ದಿನೇಶ್ ಎನ್ನಲಾಗಿದೆ.
ಕುತ್ತೂರು ಪುರುಷ ಗುಡ್ಡೆ ಸಮೀಪ ಕೊಕ್ರಾಡಿ ನಾರಾವಿ ರಸ್ತೆಯಲ್ಲಿ ಬೈಕ್ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು ಪರಿಣಾಮ ಇಬ್ಬರು ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ರಾತ್ರಿಯ ವೇಳೆ ಯಾವುದೋ ಕಾರ್ಯಕ್ರಮ ಮುಗಿಸಿ ಹಿಂತಿರುಗುವ ವೇಳೆ ರಾತ್ರಿ ಹನ್ನೆರಡು ಗಂಟೆಯ ಸುಮಾರಿಗೆ ಅಪಘಾತ ಸಂಭವಿಸಿರುವುದಾಗಿ ತಿಳಿದು ಬಂದಿದೆ.
ವೇಣೂರು ಪೋಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.