Gl harusha
ಅಪಘಾತ

ಕೆಂಪೇಗೌಡ ಏರ್ ಪೋರ್ಟ್: ನಿಂತಿದ್ದ ವಿಮಾನಕ್ಕೆ ಟಿಟಿ ವಾಹನ ಡಿಕ್ಕಿ; ತಪ್ಪಿದ ಭಾರೀ ದುರಂತ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಿನ್ನೆ ಸಂಜೆ ಘಟನೆ ನಡೆದಿದೆ. ಡಿಕ್ಕಿಯ ರಬ್ಬಸಕ್ಕೆ ಟಿಟಿ ವಾಹನದ ಟಾಪ್ ನಚ್ಚುಗುಜ್ಜಾಗಿದೆ. ಸಣ್ಣ ಪುಟ್ಟ ಗಾಯಗಳೊಂದಿಗೆ ಟಿಟಿ ಚಾಲಕ ಪಾರಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಟ್ಟು ನಿಂತಿದ್ದ ವಿಮಾನಕ್ಕೆ ಟಿಟಿ ವಾಹನ ಡಿಕ್ಕಿಯಾಗಿದೆ.

srk ladders
Pashupathi
Muliya

ಇಂಜಿನ್ ರಿಪೇರಿಯಿಂದಾಗಿ ವಿಮಾನ ಕೆಟ್ಟು ನಿಂತಿತ್ತು. ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಭಾರೀ ದುರಂತ ತಪ್ಪಿದೆ.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಿನ್ನೆ ಸಂಜೆ ಘಟನೆ ನಡೆದಿದೆ. ಡಿಕ್ಕಿಯ ರಬ್ಬಸಕ್ಕೆ ಟಿಟಿ ವಾಹನದ ಟಾಪ್ ನಚ್ಚುಗುಜ್ಜಾಗಿದೆ. ಸಣ್ಣ ಪುಟ್ಟ ಗಾಯಗಳೊಂದಿಗೆ ಟಿಟಿ ಚಾಲಕ ಪಾರಾಗಿದ್ದಾರೆ.

ಕೆಲವು ದಿನಗಳಿಂದ ಇಂಡಿಗೋ ವಿಮಾನ ಕೆಟ್ಟ ನಿಂತಿತ್ತು. ಚಾಲಕನ ಅಜಾಗರೂಕತೆಯಿಂದ ವಿಮಾನಕ್ಕೆ ಟಿಟಿ ವಾಹನ ಡಿಕ್ಕಿ ಹೊಡೆದಿದೆ. ವಿಮಾನಕ್ಕೆ ಸಿಬ್ಬಂದಿಯನ್ನು ಟಿಟಿ ವಾಹನ ಕರೆದೊಯ್ಯುವ ವೇಳೆ ಘಟನೆ ನಡೆದಿದೆ. ಸಿಬ್ಬಂದಿ ಬಿಟ್ಟು ಬರುವಾಗ ನಿಂತಿದ್ದ ವಿಮಾನಕ್ಕೆ ಟಿಟಿ ವಾಹನ ಡಿಕ್ಕಿಯಾಗಿದೆ. ಘಟನೆಯ ಬಗ್ಗೆ ನಾಗರಿಕ ವಿಮಾನಯಾನ ಇಲಾಖೆಯಿಂದ ತನಿಖೆ ಕೈಗೊಳ್ಳಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts