ಅಪಘಾತ

ಕಾರು-ಆಟೋ ರಿಕ್ಷಾ ನಡುವೆ ಡಿಕ್ಕಿ, ಆಟೋ ಚಾಲಕ ಸಾವು…!!

GL
ಪೆರಿಯಶಾಂತಿ ಸಮೀಪ ವಾಲ್ತಾಜೆ ಸೇತುವೆ ಬಳಿ ಕಾರು ಹಾಗೂ ಆಟೋ ರಿಕ್ಷಾವೊಂದರ ನಡುವೆ ಡಿಕ್ಕಿ ಸಂಭವಿಸಿ ಆಟೋ ರಿಕ್ಷಾ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಎ.20ರಂದು ಸಂಜೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿ ಸಮೀಪ ವಾಲ್ತಾಜೆ ಸೇತುವೆ ಬಳಿ ಕಾರು ಹಾಗೂ ಆಟೋ ರಿಕ್ಷಾವೊಂದರ ನಡುವೆ ಡಿಕ್ಕಿ ಸಂಭವಿಸಿ ಆಟೋ ರಿಕ್ಷಾ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಎ.20ರಂದು ಸಂಜೆ ನಡೆದಿದೆ.

chennai-shopping
maithri

ಶಿರಾಡಿ ಗ್ರಾಮದ ಅಡ್ಡಹೊಳೆ ಸಮೀಪದ ಪೇರಮಜಲು ನಿವಾಸಿ ಪ್ರಭಾಕರ (40ವ.) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಪ್ರಭಾಕರ ಅವರು ನೆಲ್ಯಾಡಿಯಿಂದ ಗುಂಡ್ಯ ಕಡೆಗೆ ತೆರಳುತ್ತಿದ್ದವರು ಪೆರಿಯಶಾಂತಿ ತಲುಪುತ್ತಿದ್ದಂತೆ ಬೆಂಗಳೂರಿನಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ.

ಘಟನೆಯಲ್ಲಿ ಆಟೋ ಚಾಲಕ ಪ್ರಭಾಕರ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸ್ಥಳಕ್ಕೆ ನೆಲ್ಯಾಡಿಹೊರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts