ಅಪಘಾತ

ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ಸಾವು!!

GL
ನದಿಯಲ್ಲಿ ಸಂಜೆ ಸ್ನಾನ ಮಾಡಲು ಆರು ಮಂದಿ ತೆರಳಿದ್ದರು. ನೀರಿನ ಆಳ ತಿಳಿಯದೇ ಇಳಿದು ಈಜಲಾಗದೆ ಪ್ರಾಣ ಕಳೆದುಕೊಂಡಿದ್ದಾರೆ. ತಂಡವು ಸ್ಥಳಕ್ಕೆ ತಲುಪಿ ಅವರನ್ನು ಹೊರತೆಗೆಯಲು ಕಾರ್ಯಾಚರಣೆ ನಡೆಸಲಾಯಿತು

ಈ ಸುದ್ದಿಯನ್ನು ಶೇರ್ ಮಾಡಿ

ಒಂದೇ ಕುಟುಂಬದ 6 ಮಂದಿ ನದಿಯಲ್ಲಿ ಮುಳುಗಿ ಪ್ರಾಣ ಬಿಟ್ಟಿರುವ ಹೃದಯ ವಿದ್ರಾವಕ ಘಟನೆ ಗುಜರಾತ್‌ನ ಖೇಡಾ ಜಿಲ್ಲೆಯ ಮೆಷ್ಟೋ ನದಿಯಲ್ಲಿ ನಡೆದಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ನಾಡಿಯಾಡ್ ಅಗ್ನಿಶಾಮಕ ದಳದ ತಂಡವು ಕನಿಜ್ ಗ್ರಾಮದ ಬಳಿ ಸ್ಥಳಕ್ಕೆ ತಲುಪಿ, ಆರು ಶವಗಳನ್ನು ನದಿಯಿಂದ ಹೊರತೆಗೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

chennai-shopping
maithri

ಕನಿಜ್ ಗ್ರಾಮದ ಬಳಿಯ ನದಿಯಲ್ಲಿ ಸಂಜೆ ಸ್ನಾನ ಮಾಡಲು ಆರು ಮಂದಿ ತೆರಳಿದ್ದರು. ನೀರಿನ ಆಳ ತಿಳಿಯದೇ ಇಳಿದು ಈಜಲಾಗದೆ ಪ್ರಾಣ ಕಳೆದುಕೊಂಡಿದ್ದಾರೆ. ತಂಡವು ಸ್ಥಳಕ್ಕೆ ತಲುಪಿ ಅವರನ್ನು ಹೊರತೆಗೆಯಲು ಕಾರ್ಯಾಚರಣೆ ನಡೆಸಲಾಯಿತು ಎಂದು ಖೇಡಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ರಾಜೇಶ್ ಗಾಧಿಯಾ ಮಾಹಿತಿ ನೀಡಿದ್ದಾರೆ. ಎಲ್ಲಾ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts