ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಗಿರಿಜಾ ವ್ಯಾಸ್ (79)ಗುರುವಾರ ದೇವರಿಗೆ ಆರತಿ ಮಾಡುವಂತಹ ಸಂದರ್ಭದಲ್ಲಿ ಬೆಂಕಿ ಹೊತ್ತಿಕೊಂಡು (ಮೇ 1) ನಿಧನರಾಗಿದ್ದಾರೆ.
ಗಿರಿಜ ವ್ಯಾಸ್ ಅವರು ಮನೆಯಲ್ಲಿ ದೇವರಿಗೆ ಆರತಿ ಬೆಳಗುವ ವೇಳೆ ಬಟ್ಟೆಗೆ ಬೆಂಕಿ ತಗುಲಿತ್ತು. ಇದರಿಂದ ಗಿರಿಜಾ ಅವರಿಗೆ ತೀವ್ರ ಸುಟ್ಟ ಗಾಯಗಳಾಗಿದ್ದವು. ತಕ್ಷಣ ಅಹಮದಾಬಾದ್‌ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ.
ವ್ಯಾಸ್ ಪ್ರಮುಖ ಕಾಂಗ್ರೆಸ್ ನಾಯಕರಾಗಿದ್ದು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅವರು ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು ಮತ್ತು ರಾಷ್ಟ್ರೀಯ ಮಹಿಳಾ ಆಯೋಗದ (ಎನ್ಸಿಡಬ್ಲ್ಯೂ) ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.




































