ಅಪಘಾತ

ಕಲ್ಲರ್ಪೆಯಲ್ಲಿ ಸರಣಿ ಅಪಘಾತ! 2 ಕಾರು, ಒಂದು ಆ್ಯಕ್ಟೀವಾಕ್ಕೆ ಡಿಕ್ಕಿ ಹೊಡೆದ ಸ್ವಿಫ್ಟ್!!

ಆರ್ಯಾಪು ಗ್ರಾಮದ ಕಲ್ಲರ್ಪೆಯಲ್ಲಿ ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಸರಣಿ ಅಪಘಾತ ಸಂಭವಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಆರ್ಯಾಪು ಗ್ರಾಮದ ಕಲ್ಲರ್ಪೆಯಲ್ಲಿ ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಸರಣಿ ಅಪಘಾತ ಸಂಭವಿಸಿದೆ.

akshaya college

ಅಪಘಾತದ ತೀವ್ರತೆ ಗಂಭೀರವಾಗಿದ್ದರೂ, ಅದೃಷ್ಟವಶಾತ್ ಯಾರೊಬ್ಬರಿಗೂ ಏನೂ ಆಗಿಲ್ಲ.

ಪುತ್ತೂರು ಕಡೆಯಿಂದ ಸುಳ್ಯಕ್ಕೆ ತೆರಳುತ್ತಿದ್ದ ಸ್ವಿಫ್ಟ್ ಕಾರಿನ ಟಯರ್ ಬ್ಲಾಸ್ಟ್ ಆಗಿ ಎದುರಿನಿಂದ ಬರುತ್ತಿದ್ದ ಎಕ್ಸ್ ಪ್ರೆಸ್ಸೋ ಹಾಗೂ ಅರ್ಬನ್ ಕ್ರ್ಯೂಸರ್ ಕಾರುಗಳಿಗೆ ಅಪ್ಪಳಿಸಿದೆ. ಇದೇ ಸಂದರ್ಭ ಪುತ್ತೂರು ಕಡೆಯಿಂದ ಬರುತ್ತಿದ್ದ ಆ್ಯಕ್ಟೀವಾ ಹಿಂಬದಿಯಿಂದ ಡಿಕ್ಕಿ ಹೊಡೆದು ಪಕ್ಕದ ಚರಂಡಿಗೆ ಬಿದ್ದಿದೆ. ಆ್ಯಕ್ಟೀವಾದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಅಪಘಾತದ ತೀವ್ರತೆಗೆ ಮೂರು ಕಾರುಗಳು ಜಖಂಗೊಂಡಿವೆ. ಮೂರು ಕಾರಿನ ಟಯರ್’ಗಳು ಸ್ಫೋಟಿಸಿವೆ. ಕಾರಿನ ಏರ್ ಬ್ಯಾಗ್ ತೆರೆದುಕೊಂಡಿವೆ.

ಪುತ್ತೂರಿನಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಎರಡು‌ ಕಾರುಗಳಿಗೆ ಡಿಕ್ಕಿ ಹೊಡೆದು, ತಿರುಗಿ ನಿಂತಿದೆ. ಕಾರಿನಲ್ಲಿದ್ದವರು ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ.

ಸಂಪ್ಯ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪೆರ್ನಾಜೆ ಬಳಿ ಬಸ್ – ಕಾರು ಅಪಘಾತ! ರಸ್ತೆಯಲ್ಲಿ ಚೆಲ್ಲಿದ್ದ ತೈಲಕ್ಕೆ ಜಾರಿದ ಕೆವಿಜಿ ನಿವೃತ್ತ ಪ್ರಾಂಶುಪಾಲರಿದ್ದ ಕಾರು!!

ಪುತ್ತೂರು: ಸುಳ್ಯದಿಂದ ಪುತ್ತೂರಿಗೆ ಆಗಮಿಸುತ್ತಿದ್ದ ಕಾರು ಹಾಗೂ ಮೈಸೂರು ಕಡೆ ತೆರಳುತ್ತಿದ್ದ…