ಅಪಘಾತ

ಭೀಕರ ರಸ್ತೆ ಅಪಘಾತ; 13 ಮಂದಿ ಮೃತ್ಯು, 11 ಜನರಿಗೆ ಗಾಯ

tv clinic
ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ಕೊಂದು ಟ್ರೇಲರ್‌ಗೆ ಡಿಕ್ಕಿ ಹೊಡೆದು  ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 13 ಜನರು ಸಾವನ್ನಪ್ಪಿದ್ದು ಹನ್ನೊಂದು ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ರಾಯ್‌ಪುರ-ಬಲೋದಬಜಾ‌ರ್ ರಸ್ತೆಯ ಸರಗಾಂವ್ ಬಳಿ ಭಾನುವಾರ ತಡರಾತ್ರಿ ಸಂಭವಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

core technologies

ಮೃತರಲ್ಲಿ ನಾಲ್ವರು ಮಕ್ಕಳು ಹಾಗೂ ಒಂಬತ್ತು ಮಂದಿ ಮಹಿಳೆಯರು ಸೇರಿದ್ದಾರೆ ಎನ್ನಲಾಗಿದೆ.

akshaya college

ಚಟೌಡ್ ಗ್ರಾಮದ ಕುಟುಂಬವೊಂದು ಸಮಾರಂಭದಲ್ಲಿ ಭಾಗವಹಿಸಲು ಬನ್ಸಾರಿ ಗ್ರಾಮಕ್ಕೆ ಹೋಗಿ ವಾಪಸ್ಸಾಗುತ್ತಿದ್ದ ವೇಳೆ ಪ್ರಯಾಣಿಸುತ್ತಿದ್ದ ಟ್ರಕ್ ಎದುರಿಗೆ ಬರುತ್ತಿದ್ದ ಟ್ರೇಲರ್‌ಗೆ ಡಿಕ್ಕಿ ಹೊಡೆದಿದೆ.

ಅಪಘಾತದ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಗಾಯಾಳುಗಳನ್ನು ರಾಯ್ಸುರ ಆಸ್ಪತ್ರೆಗೆ ಸಾಗಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ನಡೆಸಲು ಆಸ್ಪತ್ರೆಗೆ ಸಾಗಿಸಲಾಗಿದೆ.

ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts