tamanvi
ಅಪಘಾತ

ಚಲಿಸುತ್ತಿದ್ದ ಕಾರ ಮೇಲೊರಗಿದ ಬೃಹತ್ ಮರ | ಮಗು ಸಹಿತ ನಾಲ್ಕು ಮಂದಿಗೆ ಗಾಯ

ಉಪ್ಪಿನಂಗಡಿ: ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಮಗು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ರವಿವಾರ ಸುಬ್ರಹ್ಮಣ್ಯ – ಉಡುಪಿ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ನೂಜಿಬಾಳ್ತಿಲದಲ್ಲಿ ಸಂಭವಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ: ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಮಗು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ರವಿವಾರ ಸುಬ್ರಹ್ಮಣ್ಯ – ಉಡುಪಿ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ನೂಜಿಬಾಳ್ತಿಲದಲ್ಲಿ ಸಂಭವಿಸಿದೆ.

ಕುಕ್ಕೆ ಸುಬ್ರಹ್ಮಣ್ಯ ಭಾಗದಿಂದ ಇಚ್ಲಂಪಾಡಿ ಮೂಲಕ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರಿನ ಮೇಲೆ ನೂಜಿಬಾಳ್ತಿಲ ಗ್ರಾಮದ ಕನ್ವಾರೆ ಎಂಬಲ್ಲಿ ಬೃಹತ್ ಮರ ಮುರಿದು ಬಿದ್ದಿದೆ. ಘಟನೆಯಿಂದ ಕಾರಿನಲ್ಲಿದ್ದ ಚಾಲಕ, ಇಬ್ಬರು ಮಹಿಳೆಯವರು, ಒಂದು ಮಗು ಕಾರಿನಲ್ಲಿ ಸಿಲುಕಿಕೊಂಡಿದ್ದರು. ಕೂಡಲೇ ಕಾರ್ಯಾಚರಣೆ ನಡೆಸಿದ ಸ್ಥಳೀಯರು ಕಾರಿನಲ್ಲಿದ್ದವರು ಹೊರ ತೆಗೆದು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಿದ್ದಾರೆ.

ಕಾರಿನಲ್ಲಿದ್ದವರ ಮುಖ, ಮೈ-ಕೈಗೆ ತೀವ್ರ ತರಹದ ಗಾಯವಾಗಿದೆ ಎಂದು ತಿಳಿದು ಬಂದಿದೆ. ಘಟನೆಯಿಂದ ಕೆಲ ಕಾಲ ವಾಹನ ಸಂಚಾರಕ್ಕೆ ತಡೆ ಉಂಟಾಯಿತು. ಘಟನೆಯಲ್ಲಿ ಕಾರು ಸಂಪೂರ್ಣ ಜಖಂಗೊಂಡಿದೆ. ಸ್ಥಳೀಯರು ಮರ ತೆರವಿಗೆ ಸಹಕರಿಸಿದರು.

ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts