ಅಪಘಾತ

ಬೈಕ್ ಅಡ್ಡ ಹಾಕಿದ ಟ್ರಾಫಿಕ್ ಪೊಲೀಸರು! ನಾಯಿ ಕಚ್ಚಿದ ಲಗುಬಗೆ – ಧಾವಂತಕ್ಕೆ ಅಪಘಾತ: ಮಗು ದಾರುಣ ಸಾವು!!

GL
ಮಂಡ್ಯ: ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ ಮೂರು ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಮಂಡ್ಯದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಎಎಸ್ಐಗಳನ್ನು ಅಮಾನತು ಮಾಡಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಡ್ಯ: ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ ಮೂರು ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಮಂಡ್ಯದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಎಎಸ್ಐಗಳನ್ನು ಅಮಾನತು ಮಾಡಲಾಗಿದೆ.

chennai-shopping
maithri

ಮಗು ಸಾವಿಗೆ ಮಂಡ್ಯ ಟ್ರಾಫಿಕ್ ಪೊಲೀಸರು ಕಾರಣವೆಂದು ಕುಟುಂಬಂಸ್ಥರು ಹೆದ್ದಾರಿಯಲ್ಲಿ ಪ್ರತಿಭಟನೆ ಕುಳಿತ್ತಿದ್ದು, ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತುಕೊಂಡು ಮಂಡ್ಯ ಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿ, ಹೆಲ್ಮೆಟ್​ ತಪಾಸಣೆ ಮಾಡುತ್ತಿದ್ದ ಮೂವರು ಎಎಸ್​ಐಗಳನ್ನು ಅಮಾನತು ಮಾಡಿದ್ದಾರೆ.

ಈ ಬಗ್ಗೆ ಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ಮಾಹಿತಿ ನೀಡಿದ್ದಾರೆ. ASIಗಳಾದ ಜಯರಾಮ್​, ನಾಗರಾಜ್​, ಗುರುದೇವ್ ಅಮಾನತುಗೊಂಡವರು.

ಮದ್ದೂರು ತಾಲ್ಲೂಕಿನ ಗೊರವನಹಳ್ಳಿಗೆ ಸೇರಿದ ಅಶೋಕ್ ಮತ್ತು ವಾಣಿ ದಂಪತಿ, ತಮ್ಮ ಮಗಳು ಹೃತೀಕ್ಷಗೆ (3 ವರ್ಷ) ನಾಯಿ ಕಚ್ಚಿದ್ದ ಹಿನ್ನೆಲೆಯಲ್ಲಿ ತುರ್ತು ಚಿಕಿತ್ಸೆಗಾಗಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಬೈಕ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ಮಂಡ್ಯ ನಗರದ ನಂದ ಸರ್ಕಲ್ ಬಳಿ ಟ್ರಾಫಿಕ್ ಪೊಲೀಸರು ಹೆಲ್ಮೆಟ್ ತಪಾಸಣೆಗಾಗಿ ಬೈಕ್‌ ಅನ್ನು ಅಡ್ಡಗಟ್ಟಿದ್ದಾರೆ. ಏಕಾಏಕಿ ಹಠಾತ್ ಅಡ್ಡಗಟ್ಟಿದ ಪರಿಣಾಮ, ಅಶೋಕ್ ಚಾಲನೆ ಮಾಡುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಇದೇ ವೇಳೆ ಹಿಂದಿನಿಂದ ಬಂದ ಟೆಂಪೋವೊಂದು ಮಗು ಹೃತೀಕ್ ಮೇಲೆ ಹರಿದಿದೆ. ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟಿದೆ. ಇದರಿಂದ ಸಿಡಿದೆದ್ದ ಕುಟುಂಬಸ್ಥರು ಟ್ರಾಫಿಕ್​ ಪೊಲೀಸರ ವಿರುದ್ಧ ಆಕ್ರೋಶಗೊಂಡಿದ್ದು, ಹೆದ್ದಾರಿಯಲ್ಲಿ ಮಗುವಿನ ಶವವಿಟ್ಟು ಪ್ರತಿಭಟನೆಗಿಳಿದಿದ್ದಾರೆ.

ಕಣ್ಣೆದುರಲ್ಲೇ ಸಾವನ್ನಪ್ಪಿದ ಮಗುವನ್ನು ಪೋಷಕರು ರಸ್ತೆಯ ಮಧ್ಯೆ ಮಡಿಲಲ್ಲಿ ಇಟ್ಟುಕೊಂಡು ಗೋಳಾಡಿದ್ದಾರೆ. ಇನ್ನು ಈ ದೃಶ್ಯವನ್ನು ಕಂಡ ಸಾರ್ವಜನಿಕರು ಮಮ್ಮಲ ಮರುಗಿದ್ದು, ಪೊಲೀಸರಿಗೆ ಹಿಡಿ ಶಾಪ ಹಾಕುತ್ತಿದ್ದಾರೆ. ಈ ಘಟನೆಯಿಂದಾಗಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸ್ವಲ್ಪ ಹೊತ್ತು ಸಂಚಾರಕ್ಕೂ ತೊಂದರೆಯಾಯಿತು. ಇನ್ನು ಮೃತ ಮಗು ಹೃತೀಕ್ಷ ಸಾವು ಸಂಬಂಧ ಮಂಡ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಘಟನೆ ನಡೆದ ಬಳಿಕ ಕಾಂಗ್ರೆಸ್​ ಶಾಸಕ ಗಣಿಗ ರವಿಕುಮಾರ್‌ ಪ್ರತಿಕ್ರಿಯಿಸಿ, ನಾನು ಸಂತ್ರಸ್ತರನ್ನು ಭೇಟಿಯಾಗಿ ಮಾತನಾಡುತ್ತೇನೆ. ಘಟನೆಗೆ ಕಾರಣರಾದ ಪೊಲೀಸರನ್ನು ಅಮಾನತುಗೊಳಿಸಲು ಸೂಚನೆ ನೀಡಿದ್ದೇನೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಇದೀಗ ಮಂಡ್ಯ ಎಸ್ಪಿ, ಘಟನೆಗೆ ಕಾರಣರಾದ ಮೂವರು ಪೊಲೀಸರನ್ನು ಅಮಾನತು ಮಾಡಿದ್ದಾರೆ.

ಪ್ರತಿಭಟನಾ ಸ್ಥಳಕ್ಕೆ ಎಸ್ಪಿ ಭೇಟಿ
ಇನ್ನು ಪ್ರತಿಭಟನಾ ಸ್ಥಳಕ್ಕೆ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿದ್ದು, ಪ್ರತಿಭಟನಾಕಾರರ ಮನವೊಲಿಸಲು ಹರಸಾಹಸಪಟ್ಟರು. ಈ ವೇಳೆ ಮಾತನಾಡಿದ ಅವರು, ಘಟನೆ ವಿಷಾದ ವ್ಯಕ್ತಪಡಿಸುತ್ತೇನೆ. ಕರ್ತವ್ಯದಲ್ಲಿದ್ದ ಮೂವರು ASIಗಳನ್ನ ಅಮಾನತ್ತು ಮಾಡಲಾಗಿದೆ. ಪ್ರಕರಣ ಸಂಬಂಧ ಇಲಾಖಾ ತನಿಖೆ ಮಾಡುತ್ತೇವೆ. ಅಲ್ಲದೇ ಶಾಸಕರ ಜೊತೆ ಮಾತನಾಡಿದ್ದು, ಮಗು ಕುಟುಂಬಕ್ಕೆ ಅಗತ್ಯ ಪರಿಹಾರದ ಭರವಸೆ ನೀಡಿದ್ದಾರೆ ಎಂದು ಮೃತ ಮಗುವಿನ ಪೋಷಕರು, ಪ್ರತಿಭಟನಾಕಾರರಿಗೆ ತಿಳಿಸಿದರು.

25 ಲಕ್ಷ ರೂ.ಪರಿಹಾರ ನೀಡುವಂತೆ ಅಶೋಕ್ ಆಗ್ರಹ:
ಇನ್ನು ಈ ಬಗ್ಗೆ ಬೆಂಗಳೂರಿನಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮಾತನಾಡಿ, ಪೊಲೀಸ್ ಇಲಾಖೆಯ ನಿರ್ಲಕ್ಷ್ಯದಿಂದ ಮಗುವಿನ ಸಾವಾಗಿದೆ. ಪೊಲೀಸ್ ಇಲಾಖೆಯಲ್ಲಿ ಶಿಸ್ತು ಇಲ್ಲದೇ ಇರುವುದು ಇದಕ್ಕೆ ನೇರ ಕಾರಣ. ಏಕಾಏಕಿ ಹೋಗಿ ರಸ್ತೆಯಲ್ಲಿ ಅಡ್ಡ ಹಾಕುವ ಕೆಲಸ ಮಾಡುತ್ತಾರೆ. ಪೊಲೀಸ್ ಕೈ ತಗುಲಿ ಕೆಳಗೆ ಬಿದ್ದು ಮಗು ಮೃತಪಟ್ಟಿದೆ ಎಂಬ ಮಾಹಿತಿ ನನಗೆ ಬಂದಿದೆ. ಪೊಲೀಸರಿಂದಲೇ ಆ ಮಗು ಮೃತಪಟ್ಟಿದೆ. ಹೀಗಾಗಿ ರಾಜ್ಯ ಸರ್ಕಾರ ಮಗುವಿನ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಕೊಡಬೇಕು ಎಂದು ಆಗ್ರಹಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts