ಅಪಘಾತ

ಆರ್‌ಸಿಬಿ ಸಂಭ್ರಮಾಚರಣೆ ಕಾಲ್ತುಳಿತದಲ್ಲಿ ಇಳಂತಿಲ ಮೂಲದ ಯುವತಿ ಸಾವು

ಉದ್ಯಮಿಯಾಗಿರುವ ಇಳಂತಿಲ ಮೂಲದ ಕರುಣಾಕರ ಶೆಟ್ಟಿ ಮತ್ತು ಕಾರ್ಕಳ ಹೆಬ್ರಿಯ ಪೂಜಾ ಶೆಟ್ಟಿಯವರ ಪುತ್ರಿ ಚಿನ್ನಯಿ ಶೆಟ್ಟಿ(20) ಕಾಲ್ತುಳಿತದಿಂದ ಸಾವಿಗೀಡಾಗಿದವರು ಎಂದು ತಿಳಿದು ಬಂದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ:18 ವರ್ಷಗಳ ನಂತರ ಚೊಚ್ಚಲ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ವೇಳೆ ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟಿದ್ದು, ಉಪ್ಪಿನಂಗಡಿ ಇಳಂತಿಲ ಮೂಲದ ಓರ್ವ ಯುವತಿಯೂ ಸೇರಿದ್ದಾರೆ ಎಂದು ತಿಳಿದು ಬಂದಿದೆ.

akshaya college

ಉದ್ಯಮಿಯಾಗಿರುವ ಇಳಂತಿಲ ಮೂಲದ ಕರುಣಾಕರ ಶೆಟ್ಟಿ ಮತ್ತು ಕಾರ್ಕಳ ಹೆಬ್ರಿಯ ಪೂಜಾ ಶೆಟ್ಟಿಯವರ ಪುತ್ರಿ ಚಿನ್ಮಯಿ ಶೆಟ್ಟಿ(20) ಕಾಲ್ತುಳಿತದಿಂದ ಸಾವಿಗೀಡಾಗಿದವರು ಎಂದು ತಿಳಿದು ಬಂದಿದೆ.

18 ವರ್ಷದ ಕಾಯುವಿಕೆಯ ನಂತರ ಐಪಿಎಲ್ ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಬೆಂಗಳೂರಿನಲ್ಲಿ ಅಭಿಮಾನಿಗಳು ಬರಮಾಡಿಕೊಂಡಾಗ, ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ ಹಿನ್ನೆಲೆಯಲ್ಲಿ ನೂಕುನುಗ್ಗಲು ಹಾಗೂ ಕಾಲ್ತುಳಿತ ಸಂಭವಿಸಿ 11 ಜನ ಸಾವನ್ನಪ್ಪಿ, 33 ಮಂದಿ ಗಾಯಗೊಂಡಿದ್ದರು.

ಕಾಲ್ತುಳಿತದಲ್ಲಿ ಗಂಭೀರ ಗಾಯಗೊಂಡಿದ್ದ ಚಿನ್ಮಯಿ ಶೆಟ್ಟಿಯವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಸಾವನಪ್ಪಿದ್ದಾರೆ.

ಬೆಂಗಳೂರಿನ ಕನಕಪುರ ರಸ್ತೆಯ ಜ್ಯೋತಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎರಡನೇ ವರ್ಷದ ಬಿಇ ವ್ಯಾಸಂಗ ಮಾಡುತ್ತಿದ್ದ ಚಿನ್ಮಯಿ ಶೆಟ್ಟಿ ಅವರು ಅತ್ಯುತ್ತಮ ಯಕ್ಷಗಾನ ಕಲಾವಿದೆಯೂ ಆಗಿದ್ದರು.

ಇವರು ಬೆಂಗಳೂರಿನ ಯಕ್ಷತರಂಗ ತಂಡದ ವಿದ್ಯಾರ್ಥಿನಿಯಾಗಿದ್ದರು. ಚಿನ್ಮಯಿ ಶೆಟ್ಟಿಯವರ ತಂದೆ ಕರುಣಾಕರ ಶೆಟ್ಟಿಯವರು ಮೂಲತ: ಸೋಮವಾರಪೇಟೆಯವರಾಗೊದ್ದು, ಕೆಲ ವರ್ಷಗಳ ಹಿಂದೆ ಇಳಂತಿಲದಲ್ಲಿ ಜಾಗ ಖರೀದಿಸಿ ಮನೆ ಮಾಡಿದ್ದರು.

ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ಕರುಣಾಕರ ಶೆಟ್ಟಿಯವರು ಕುಟುಂಬದೊಂದಿಗೆ ಬೆಂಗಳೂರಿನಲ್ಲಿಯೇ ವಾಸ್ತವ್ಯವಿದ್ದು ಅಂಡೆತ್ತಡ್ಕದಲ್ಲಿ ಅವರ ತಾಯಿ ಮತ್ತು ಮಗಳ ಮಗ ವಾಸ್ತವ್ಯವಿದ್ದಾರೆ.

ವಿಷಯ ತಿಳಿದು ಅವರು ಬೆಂಗಳೂರಿಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

ಮೃತಪಟ್ಟ 11 ಮಂದಿಯ ವಿವರ

ಭೂಮಿಕ, 20 ವರ್ಷ (ನೆಲಮಂಗಲ)

ಸಹನ 19 ವರ್ಷ (ಕೋಲಾರ)

ಪೂರ್ಣಚಂದ, 32 ವರ್ಷ (ಮಂಡ್ಯ)

ಚಿನ್ಮಯಿ, 19 ವರ್ಷ

ದಿವ್ಯಾಂಶಿ, 13 ವರ್ಷ

ಶ್ರವಣ, 20 ವರ್ಷ (ಚಿಕ್ಕಬಳ್ಳಾಪುರ)

ದೇವಿ, 29 ವರ್ಷ

ಶಿವಲಿಂಗ, 17 ವರ್ಷ

ಮನೋಜ, 33 ವರ್ಷ (ತುಮಕೂರು)

ಅಕ್ಷತಾ, (ಮಂಗಳೂರು)

ಮತ್ತೊಬ್ಬರ ಹೆಸರು ಪತ್ತೆಯಾಗಿಲ್ಲ.

ಮೃತರ ಪೈಕಿ ಶ್ರವಣ್, ಭೂಮಿಕ್, ಮನೋಜ್, ಚಿನ್ಮಯಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ನಡೆಸಿ ಪೋಷಕರಿಗೆ ಹಸ್ತಾಂತರಿಸಲಾಗಿದೆ. ಇನ್ನುಳಿದ ಮೃತದೇಹಗಳ ಮರಣೋತ್ತರ ಪರೀಕ್ಷೆ ಇಂದು ನಡೆಯಲಿದೆ.

ಗಾಯಾಳುಗಳ ವಿವರ: ದೀಪಕ್ ಕೆ.ಸಿ., ಸಂಪತ್ ಕುಮಾರ್ ಸಹಿತ 5 ಮಂದಿ ಮಣಿಪಾಲ್ (ವಿಕ್ರಂ ಆಸ್ಪತ್ರೆ)ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಪರ್ಶ ಆಸ್ಪತ್ರೆಯಲ್ಲಿ 5 ಮಂದಿ, ವೈದೇಹಿ ಆಸ್ಪತ್ರೆಯಲ್ಲಿ 14 ಮಂದಿ, ಬೌರಿಂಗ್ ಆಸ್ಪತ್ರೆಯಲ್ಲಿ 18 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts