tamanvi
ಅಪಘಾತ

ಉಟ್ಟ ಬಟ್ಟೆಗೆ ಹತ್ತಿಕೊಂಡ ಪೂಜೆಯ ಬೆಂಕಿ, ಮೃತ್ಯು!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಪೂಜೆಯ ವೇಳೆ ಉಟ್ಟ ಬಟ್ಟೆಗೆ ಬೆಂಕಿ ತಗುಲಿದ ಪರಿಣಾಮ ಗಂಭೀರ ಸ್ಥಿತಿಯಲ್ಲಿ ನಗರದ ಖಾಸಗಿ ಆಸ್ಪತ್ರೆಯಲ್ಲಿದ್ದ ವೃದ್ಧೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.

maithri

ನಗರದ ಮೇರಿಹಿಲ್ ಸಮೀಪದ ಗುರುನಗರ ಎಂಬಲ್ಲಿನ ಸರೋಜಿನಿ (64) ಎಂಬವರು ಮೃತಪಟ್ಟರೆ, ಅವರನ್ನು ರಕ್ಷಿಸಲು ಮುಂದಾಗ ಪುತ್ರ ಅಕ್ಷಯ್ (20)ಗೆ ಸುಟ್ಟ ಗಾಯವಾಗಿದೆ.

ಮಂಗಳವಾರ ರಾತ್ರಿ ಮನೆಯಲ್ಲಿ ಪೂಜೆ ಮಾಡುತ್ತಿದ್ದ ವೇಳೆ ಸರೋಜಿನಿಯ ಬಟ್ಟೆಗೆ ಬೆಂಕಿ ತಗುಲಿತ್ತು. ಈ ವೇಳೆ ಪುತ್ರ ಆಕೆಯನ್ನು ರಕ್ಷಿಸಲು ಮುಂದಾಗಿದ್ದು, ಆತನಿಗೂ ಬೆಂಕಿಯಿಂದ ಸುಟ್ಟಗಾಯವಾಗಿತ್ತು. ವಿಷಯ ತಿಳಿದ ನೆರೆಮನೆಯವರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಮಾಸ್ಟರ್ ಆಗಿದ್ದ ಮಹಿಳೆಯ ಗಂಡ ಮೃತಪಟ್ಟ ಬಳಿಕ ಮಹಿಳೆ ಮಾನಸಿಕ ಅಸ್ವಸ್ಥತೆಗೆ ಒಳಗಾಗಿದ್ದರು ಎಂದು ತಿಳಿದು ಬಂದಿದೆ. ಈ ಬಗ್ಗೆ ಕಂಕನಾಡಿ ನಗರದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರಿನಲ್ಲಿ ಸ್ಕೂಟರ್ ಢಿಕ್ಕಿ: ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕೊಯಿಲ ಸೀತಾರಾಮ ಗೌಡ ಮೃತ್ಯು!!

ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೋರ್ವರು ಬುಧವಾರ ಮಂಗಳೂರಿನ ಕೆಪಿಟಿ ಬಳಿ ಸಂಭವಿಸಿದ…