ಅಪಘಾತ

ರೈಲಿನಿಂದ ಹಳಿಗೆ ಬಿದ್ದ ಪ್ರಯಾಣಿಕರು: ಐವರು ಸಾವು!

ಟ್ರೈನ್‌ನಿಂದ ಹಳಿಗೆ ಬಿದ್ದು ಐವರು ಪ್ರಯಾಣಿಕರು ಮೃತಪಟ್ಟ ಘಟನೆ ಮುಂಬೈನಲ್ಲಿ ಸೋಮವಾರ (ಜೂ.09) ನಡೆದಿದೆ. ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ನಿಂದ ಥಾಣೆಯ ಕಸರಾ ಪ್ರದೇಶದ ಕಡೆಗೆ ಹೋಗುತ್ತಿದ್ದ ರೈಲಿನಿಂದ ಪ್ರಯಾಣಿಕರು ಹಳಿಗೆ ಬಿದ್ದಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಮುಂಬೈ: ಲೋಕಲ್‌ ಟ್ರೈನ್‌ನಿಂದ ಹಳಿಗೆ ಬಿದ್ದು ಐವರು ಪ್ರಯಾಣಿಕರು ಮೃತಪಟ್ಟ ಘಟನೆ ಮುಂಬೈನಲ್ಲಿ ಸೋಮವಾರ (ಜೂ.09) ನಡೆದಿದೆ.

akshaya college

ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ನಿಂದ ಥಾಣೆಯ ಕಸರಾ ಪ್ರದೇಶದ ಕಡೆಗೆ ಹೋಗುತ್ತಿದ್ದ ರೈಲಿನಿಂದ ಪ್ರಯಾಣಿಕರು ಹಳಿಗೆ ಬಿದ್ದಿದ್ದಾರೆ.

ಅಧಿಕಾರಿಗಳ ಪ್ರಕಾರ, ಕನಿಷ್ಠ 10 ರಿಂದ 12 ಪ್ರಯಾಣಿಕರು ರೈಲಿನಿಂದ ಬಿದ್ದಿದ್ದಾರೆ ಎಂದು ವರದಿಯಾಗಿದೆ.

ರೈಲಿನೊಳಗಿನ ಅತಿಯಾದ ಜನದಟ್ಟಣೆಯಿಂದಾಗಿ ಜನರು ಬೋಗಿಯಿಂದ ಕೆಳಗೆ ಬೀಳಲು ಕಾರಣವಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ. ವರದಿಗಳ ಪ್ರಕಾರ, ಪ್ರಯಾಣಿಕರು ಜನದಟ್ಟಣೆಯಿಂದಾಗಿ ಬಾಗಿಲುಗಳಲ್ಲಿ ನೇತಾಡಿಕೊಂಡು ಪ್ರಯಾಣಿಸುತ್ತಿದ್ದರು.

ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನೆಯ ತನಿಖೆ ನಡೆಯುತ್ತಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts