ಗುಜರಾತಿನ ಅಹಮದಾಬಾದ್ ನ ಮೇಘನಿ ನಗರದಲ್ಲಿ ಪತನಗೊಂಡ ವಿಮಾನದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಇರುವುದು ಖಾತ್ರಿಯಾಗಿದೆ.
ಗುಜರಾತಿನ 16 ಮುಖ್ಯಮಂತ್ರಿಯಾಗಿದ್ದ ವಿಜಯ್ ರೂಪಾನಿ ಅವಘಡದಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
2016-2021ರವರೆಗೆ ಮುಖ್ಯಮಂತ್ರಿಯಾಗಿದ್ದ ರೂಪಾನಿ ಅವರು ಕುಳಿತಿರುವುದನ್ನು ಸೆಲ್ಫಿ ತೆಗೆದ ಸಹಪ್ರಯಾಣಿಕೆಯ ಫೊಟೋ ಇದೀಗ ವೈರಲ್ ಆಗುತ್ತಿದೆ.
ಮೇಘಾನಿ ನಗರದ ಬಿಜೆ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ಕಟ್ಟಡದ ಮೇಲೆ ಪತನಗೊಂಡ ವಿಮಾನ ಬಿದ್ದಿದ್ದು, ಹಲವು ಮಂದಿ ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ವಿಮಾನದ ಸಹ ಪೈಲೆಟ್ ಕ್ಲೈವ್ ಕುಂದರ್ ಮಂಗಳೂರು ಮೂಲದವರು. ಅವರು ಘಟನೆಯಲ್ಲಿ ದುರ್ಮರಣಕ್ಕೀಡಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಘಟನೆಯಲ್ಲಿ 300ಕ್ಕೂ ಅಧಿಕ ಮಂದಿ ಮೃತಪಟ್ಟಿರುವುದಾಗಿ ಶಂಕಿಸಲಾಗಿದೆ.