ಅಪಘಾತ

ನೆಲ್ಯಾಡಿ: ರಸ್ತೆ ಅಪಘಾತ; ಗಾಯಾಳು ಮಹೇಶ್ ಮೃತ್ಯು!!

GL
ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಜೂನ್ 20 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ: ರೆಖ್ಯ ಗ್ರಾಮದ ಪರ್ಕಳ ಸೇತುವೆಯ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಜೂನ್ 20 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ.

chennai-shopping
maithri

ಧರ್ಮಸ್ಥಳಕ್ಕೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ನೆಲ್ಯಾಡಿ ಸಮೀಪದ ಪರ್ಕಳ ಸೇತುವೆಯ ಬಳಿ ಹೆದ್ದಾರಿ ಕಾಮಗಾರಿಗಾಗಿ ರಸ್ತೆಯ ಪಕ್ಕದಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿಯಾಗಿತ್ತು. ಬಳಿಕ ಕಾರು ರಸ್ತೆಯ ತಡೆಗೋಡೆಗೆ ಗುದ್ದಿದೆ

ಈ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಮಹೇಶ್‌ರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಜೂನ್ 20 ರಂದು ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಕುರಿತು ಟ್ರ್ಯಾಕ್ಟ‌ರ್ ಚಾಲಕ ಚಿದಾನಂದ ರೇವಪ್ಪ ನೀಡಿದ ದೂರಿನ ಆಧಾರದ ಮೇಲೆ ಬೆಳ್ತಂಗಡಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts