ಅಪಘಾತ

ರಿಕ್ಷಾ ಪಲ್ಟಿ: ಶಿವಾನಂದ್ ಮೃತ್ಯು!!

ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾವೊಂದು ಮಗುಚಿ ಬಿದ್ದು ಗಂಭೀರವಾಗಿ ಗಾಯಗೊಂಡು ಪ್ರಯಾಣಿಕನೊಬ್ಬ ಮೃತಪಟ್ಟ ಘಟನೆ ಭಾನುವಾರ ಸಂಭವಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ; ಬದ್ಯಾ‌ರ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾವೊಂದು ಮಗುಚಿ ಬಿದ್ದು ಗಂಭೀರವಾಗಿ ಗಾಯಗೊಂಡ ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಭಾನುವಾರ ಸಂಭವಿಸಿದೆ.

akshaya college

ಮೃತ ವ್ಯಕ್ತಿ ಮಾಲಾಡಿ ನಿವಾಸಿ ಶಿವಾನಂದ ಪಿ. ಮಾಳವ (33) ಎಂಬವರಾಗಿದ್ದಾರೆ.

ಗುರುವಾಯನಕೆರೆಯಿಂದ ಅಳದಂಗಡಿಗೆ ಪ್ರಯಾಣಿಸುತ್ತಿದ್ದ ವೇಳೆ ಆಟೋ ರಿಕ್ಷಾ ಅಪಘಾತ ಸಂಭವಿಸಿದೆ. ಕೂಡಲೇ ಗಂಭೀರವಾಗಿ ಗಾಯಗೊಂಡ ಇವರನ್ನು ಸ್ಥಳೀಯರ ಸಹಕಾರದೊಂದಿಗೆ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ದರೂ ಆವೇಳೆಗೆ ಅವರು ಮೃತ ಪಟ್ಟಿದ್ದಾರೆ ಎನ್ನಲಾಗಿದೆ.

ಆಟೋದಲ್ಲಿದ್ದ ಇನ್ನೊಬ್ಬರು ಗಾಯಗೊಂಡಿದ್ದು ಆವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪೆರ್ನಾಜೆ ಬಳಿ ಬಸ್ – ಕಾರು ಅಪಘಾತ! ರಸ್ತೆಯಲ್ಲಿ ಚೆಲ್ಲಿದ್ದ ತೈಲಕ್ಕೆ ಜಾರಿದ ಕೆವಿಜಿ ನಿವೃತ್ತ ಪ್ರಾಂಶುಪಾಲರಿದ್ದ ಕಾರು!!

ಪುತ್ತೂರು: ಸುಳ್ಯದಿಂದ ಪುತ್ತೂರಿಗೆ ಆಗಮಿಸುತ್ತಿದ್ದ ಕಾರು ಹಾಗೂ ಮೈಸೂರು ಕಡೆ ತೆರಳುತ್ತಿದ್ದ…