ಪುತ್ತೂರು: ಸುಳ್ಯ ತಾಲೂಕಿನ ಅರಂತೋಡು ಶಾಲಾ ಮುಂಭಾಗ ಎರಡು ಕೆ.ಎಸ್.ಆರ್.ಟಿ.ಸಿ. ಬಸ್ಸುಗಳು ಮುಖಾಮುಖಿ ಢಿಕ್ಕಿಯಾದ ಘಟನೆ ಬುಧವಾರ ಸಂಜೆ ನಡೆದಿದೆ.
ಮಡಿಕೇರಿಯಿಂದ ಪುತ್ತೂರು ಕಡೆ ಬರುತ್ತಿದ್ದ ಬಸ್ ಎದುರಿನಿಂದ ಬಂದ ಬಸ್’ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತಗೊಂಡ ಬಸ್ ಗಳ ಪೈಕಿ ಒಂದು ಅಶ್ವಮೇಧ ಬಸ್ ಎಂದು ಹೇಳಲಾಗಿದೆ.
ಸುಳ್ಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.