ಅಪಘಾತ

ಕಾಲ್ತುಳಿತ: ಮೂವರು ಐಪಿಎಸ್ ಅಧಿಕಾರಿಗಳ ಅಮಾನತು ಆದೇಶ ಅಂಗೀಕರಿಸಿದ ಕೇಂದ್ರ

GL

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಸಂಬಂಧ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ವರದಿಯನ್ನು ಕೇಂದ್ರ ಸರ್ಕಾರ ಅಂಗೀಕರಿಸಿದೆ.

chennai-shopping
maithri

ಆರ್‌ಸಿಬಿ (RCB) ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಸಾವನ್ನಪ್ಪಿದ ಹಿನ್ನೆಲೆ ಕರ್ತವ್ಯ ಲೋಪ ಆರೋಪದಡಿ ರಾಜ್ಯ ಸರ್ಕಾರ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತು ಮಾಡಿ ಕೇಂದ್ರ ಸರ್ಕಾರಕ್ಕೆ ಮಾಹಿತಿ ರವಾನೆ ಮಾಡಿತ್ತು.

ಇದೀಗ ರಾಜ್ಯ ಸರ್ಕಾರದ ವರದಿಯನ್ನು ಅಂಗೀಕರಿಸಿದ ಕೇಂದ್ರ ಡಿಪಿಎಆರ್‌ಗೆ ಮಾಹಿತಿ ರವಾನೆ ಮಾಡಿದೆ. ದಯಾನಂದ್, ವಿಕಾಸ್ ಕುಮಾರ್ ಮತ್ತು ಶೇಖರ್ ಎಂಬ ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತು ಮಾಡಿತ್ತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts