ತೆಲಂಗಾಣದ ಪಾಶಮೈಲರಾಮ್‌ನಲ್ಲಿರುವ ಸಿಗಾಚಿ ರಾಸಾಯನಿಕ ಕೇಂದ್ರದಲ್ಲಿ ಅಗ್ನಿ ಅವಘಡ ಸಂಭವಿಸಿ ಕನಿಷ್ಠ 10 ಮಂದಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.
ಕಾರ್ಖಾನೆಯಲ್ಲಿ ರಿಯಾಕ್ಟರ್ ಸ್ಫೋಟದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ.
ಘಟನೆಯಲ್ಲಿ ಸುಮಾರು 15 ರಿಂದ 20 ಜನರು ಗಾಯಗೊಂಡಿದ್ದಾರೆ. 11 ಅಗ್ನಿಶಾಮಕ ದಳದ ವಾಹನಗಳ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.