tamanvi
ಅಪಘಾತ

ಅಪಘಾತ: ಬಂಟ್ವಾಳ ಗ್ರಾಮಾಭಿವೃದ್ದಿ ಯೋಜನಾ ಅಧಿಕಾರಿ ಚಿದಾನಂದ ಮೃತ್ಯು!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ಬಿ.ಸಿ.ರೋಡಿನ ಅಜ್ಜಿಬೆಟ್ಟು ಕ್ರಾಸ್ ಬಳಿ ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದು ಸೋಮವಾರ(ಜೂ.30) ನಡೆದಿದೆ.

maithri

ಶಂಭೂರು ಕೊಪ್ಪಳ ನಿವಾಸಿ ಚಿದಾನಂದ( 50) ಅಪಘಾತದಲ್ಲಿ ಮೃತಪಟ್ಟವರು.

ಸ್ಕೂಟರ್ ಸವಾರ ಚಿದಾನಂದ ಅವರು ಬಿಸಿರೋಡು ಪೇಟೆಯಿಂದ ಅಜ್ಜಿಬೆಟ್ಟು ಕ್ರಾಸ್ ನಲ್ಲಿ ಕ್ರಾಸ್ ಮಾಡುವ ವೇಳೆ ಬಿಸಿರೋಡಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಲಾರಿ ಢಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಚಿದಾನಂದ ಅವರು ಬಂಟ್ವಾಳ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧಿಕಾರಿಯಾಗಿದ್ದಾರೆ. ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರಿನಲ್ಲಿ ಸ್ಕೂಟರ್ ಢಿಕ್ಕಿ: ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕೊಯಿಲ ಸೀತಾರಾಮ ಗೌಡ ಮೃತ್ಯು!!

ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೋರ್ವರು ಬುಧವಾರ ಮಂಗಳೂರಿನ ಕೆಪಿಟಿ ಬಳಿ ಸಂಭವಿಸಿದ…