ಅಪಘಾತ

ವಿದ್ಯುತ್ ತಂತಿ ಸ್ಪರ್ಶಿಸಿ ವೀರಪ್ಪ ಮೃತ್ಯು!!

ಹಳ್ಳಕ್ಕೆ ಇಳಿದ ವ್ಯಕ್ತಿಯೊಬ್ಬರು ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ವೇಣೂರಿನ ಬಜಿರೆ ಗ್ರಾಮದ ಪೆರ್ಮನು ಬೆಳ್ಳಿಬೆಟ್ಟು ಎಂಬಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ಹಳ್ಳಕ್ಕೆ ಇಳಿದ ವ್ಯಕ್ತಿಯೊಬ್ಬರು ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ವೇಣೂರಿನ ಬಜಿರೆ ಗ್ರಾಮದ ಪೆರ್ಮನು ಬೆಳ್ಳಿಬೆಟ್ಟು ಎಂಬಲ್ಲಿ ನಡೆದಿದೆ.

akshaya college

ವೀರಪ್ಪ (74) ಮೃತಪಟ್ಟ ವ್ಯಕ್ತಿ. ವಿದ್ಯುತ್‌ ಪರಿವರ್ತಕದ ಸಮೀಪ ತೋಟದಲ್ಲಿ ಹಾದು ಹೋಗಿದ್ದ ಎಲ್ ಟಿ ಲೈನ್ ಮೇಲೆ ತೆಂಗಿನ ಗರಿ ಬಿದ್ದು, ತಂತಿಯು ತುಂಡಾಗಿ ನೀರು ಹರಿಯುವ ಹಳ್ಳಕ್ಕೆ ಬಿದ್ದಿತ್ತು.

ಆ ತಂತಿಯಲ್ಲಿ ವಿದ್ಯುತ್ ಸರಬರಾಜಾಗುವ ಪ್ಯೂಸ್ ಹೋಗಿರುವುದು ಕಂಡು ಬಂದಿದ್ದು, ಕಾಲುದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೀರಪ್ಪರವರು, ಹಳ್ಳದ ನೀರಿನಲ್ಲಿ ತೇಲಿ ಹೋಗುತ್ತಿದ್ದ ಅಡಕೆ, ತೆಂಗಿನಕಾಯಿಯನ್ನು ಹೆಕ್ಕಲು ಇಳಿದಿದ್ದು, ಅಲ್ಲಿಯೇ ಬಿದ್ದಿದ್ದ ವಿದ್ಯುತ್ ತಂತಿಯನ್ನು ಬಳ್ಳಿ ಎಂದು ಬರಿ ಕೈಯಲ್ಲಿ ಹಿಡಿದು ಎಳೆದಾಗ, ವಿದ್ಯುತ್ ತಂತಿಯು ಕಂಬದಲ್ಲಿರುವ ಇನ್ನೊಂದು ತಂತಿಗೆ ತಾಗಿ ವಿದ್ಯುತ್ ಶಾಕ್ ಗೆ ಒಳಗಾಗಿ ಮೃತ ಪಟ್ಟಿರುವ ಸಾಧ್ಯತೆ ಇದೆ ಎಂದು ಮೆಸ್ಕಾಂ ತಿಳಿಸಿದೆ. ವೇಣೂರು ಪೊಲೀಸರು ಹಾಗೂ ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪೆರ್ನಾಜೆ ಬಳಿ ಬಸ್ – ಕಾರು ಅಪಘಾತ! ರಸ್ತೆಯಲ್ಲಿ ಚೆಲ್ಲಿದ್ದ ತೈಲಕ್ಕೆ ಜಾರಿದ ಕೆವಿಜಿ ನಿವೃತ್ತ ಪ್ರಾಂಶುಪಾಲರಿದ್ದ ಕಾರು!!

ಪುತ್ತೂರು: ಸುಳ್ಯದಿಂದ ಪುತ್ತೂರಿಗೆ ಆಗಮಿಸುತ್ತಿದ್ದ ಕಾರು ಹಾಗೂ ಮೈಸೂರು ಕಡೆ ತೆರಳುತ್ತಿದ್ದ…