ಪುತ್ತೂರು: ಹಾಲಿನ ವಾಹನವೊಂದು ಪಾದಚಾರಿ ಮೇಲ್ಸೆತುವೆಗೆ ಅಪ್ಪಳಿಸಿದ ಘಟನೆ ಸೋಮವಾರ ಸಂಜೆ ನಡೆದಿದೆ.
ಮಂಜಲ್ಪಡ್ಪು ಸುದಾನ ವಸತಿಯುತ ಶಾಲಾ ಮುಂಭಾಗ ಘಟನೆ ನಡೆದಿದೆ.
ಮಂಗಳೂರು ಕಡೆಯಿಂದ ಬರುತ್ತಿದ್ದ ವಾಹನ ಇದಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಯಾರಿಗೂ ಅಪಾಯವಾಗಿಲ್ಲ. ವಾಹನ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ.
ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ.