ಅಪಘಾತ

ಉಪ್ಪಿನಂಗಡಿ:ಬೈಕ್ ಅಪಘಾತ; ನೌಶಾದ್ ಮೃತ್ಯು!!

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ: ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನೆಕ್ಕಿಲಾಡಿಯ ಸುಭಾಶ್‌ನಗರ ನಿವಾಸಿ ನೌಶಾದ್ (35) ಚಿಕಿತ್ಸೆಗೆ ಸ್ಪಂದಿಸದೆ ಜುಲೈ 9 ರಂದು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

akshaya college

ಜೂನ್ 7 ರಂದು ಸುಭಾಶ್‌ನಗರದಿಂದ ಮಸೀದಿಗೆ ಬೈಕ್‌ನಲ್ಲಿ ತೆರಳುವಾಗ ಬೊಳ್ತಾರ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾಣಿ ಕಡೆಯಿಂದ ಬಂದ ಇನ್ನೊಂದು ಬೈಕ್ ಢಿಕ್ಕಿಯಾಗಿತ್ತು. ಈ ವೇಳೆ ರಸ್ತೆಗೆಸೆಯಲ್ಪಟ್ಟ ನೌಶಾದ್‌ರ ತಲೆ ವಿಭಾಜಕಕ್ಕೆ ಬಡಿದು ಕೋಮಾ ಸ್ಥಿತಿಗೆ ತಲುಪಿದ್ದರು. ಆರಂಭದಲ್ಲಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚೇತರಿಕೆಯ ಲಕ್ಷಣಗಳು ಕಾಣದಿದ್ದಾಗ ಅವರನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಜುಲೈ 9 ರಂದು ಬೆಳಗ್ಗೆ ಅವರು ಮೃತಪಟ್ಟಿದ್ದಾರೆ.

ಶ್ರಮಜೀವಿಯಾಗಿದ್ದ ನೌಶಾದ್, ನೆಕ್ಕಿಲಾಡಿಯ ತಂಪು ಪಾನೀಯ ಘಟಕದಲ್ಲಿ ಲೈನ್ ಸೇಲ್ ಕೆಲಸ ಮಾಡುತ್ತಿದ್ದರು ಮತ್ತು ಬಿಡುವಿನ ವೇಳೆ ಶಾಮಿಯಾನ ಕೆಲಸಗಳಿಗೆ ತೆರಳುತ್ತಿದ್ದರು. ಅವರು ಪತ್ನಿ ಹಾಗೂ 6 ಮತ್ತು 4 ವರ್ಷದ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪೆರ್ನಾಜೆ ಬಳಿ ಬಸ್ – ಕಾರು ಅಪಘಾತ! ರಸ್ತೆಯಲ್ಲಿ ಚೆಲ್ಲಿದ್ದ ತೈಲಕ್ಕೆ ಜಾರಿದ ಕೆವಿಜಿ ನಿವೃತ್ತ ಪ್ರಾಂಶುಪಾಲರಿದ್ದ ಕಾರು!!

ಪುತ್ತೂರು: ಸುಳ್ಯದಿಂದ ಪುತ್ತೂರಿಗೆ ಆಗಮಿಸುತ್ತಿದ್ದ ಕಾರು ಹಾಗೂ ಮೈಸೂರು ಕಡೆ ತೆರಳುತ್ತಿದ್ದ…