ವಿಟ್ಲ : ಟಿಪ್ಪರ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ವಿಟ್ಲದ ಕೆಲಿಂಜ ಎಂಬಲ್ಲಿ ನಡೆದಿದೆ.
ಘಟನೆ ಪರಿಣಾಮ ಕಾರಿನಲ್ಲಿದ್ದ ಗಂಡ- ಹೆಂಡತಿ ಸಹಿತ ಮಗು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಕಲ್ಲಡ್ಕದಿಂದ ವಿಟ್ಲ ಕಡೆ ಬರುತ್ತಿದ್ದ ಕಾರಿಗೆ ಕಲ್ಲಡ್ಕ ಕಡೆ ಚಲಿಸುತ್ತಿದ್ದ ಟಿಪ್ಪರ್ ಡಿಕ್ಕಿ ಹೊಡೆದಿದ್ದು, ಪರಿಣಾಮ ಕಾರಿನಲ್ಲಿದ್ದ ಗಂಡ ಹೆಂಡತಿ ಮಗು ಗಂಭೀರ ಗಾಯಗೊಂಡಿದ್ದಾರೆ.
ಗಾಯಳುಗಳನ್ನು ಅನಂತಾಡಿ ಮೂಲದದವರೆಂದು ಗುರುತಿಸಲಾಗಿದೆ. ಘಟನೆಯಲ್ಲಿ ಕಾರು ನಜ್ಜು ಗುಜ್ಜಾಗಿದ್ದು, ಗಾಯಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.