ರಾಜಸ್ಥಾನ: ಬೆಳ್ಳಂಬೆಳಗ್ಗೆ ಶಾಲೆಯ ಕಟ್ಟಡದ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಕನಿಷ್ಠ ನಾಲ್ಕು ಮಕ್ಕಳು ಮೃತಪಟ್ಟು, ಹಲವಾರು ವಿದ್ಯಾರ್ಥಿಗಳು ಅವಶೇಷಗಳಡಿ ಸಿಲುಕಿರುವ ಘಟನೆ ನಡೆದಿದೆ.
ರಾಜಸ್ಥಾನದ ಝಲಾವರ್‌ನಲ್ಲಿರುವ ಪಿಪ್ಲೋಡಿ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ (ಜು.25) ಸಂಭವಿಸಿದೆ.
ಘಟನಾ ಸ್ಥಳಕ್ಕೆ ರಕ್ಷಣಾ ತಂಡ ಧಾವಿಸಿದ್ದು ಸ್ಥಳೀಯರ ಸಹಕಾರದೊಂದಿದೆ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಘಟನೆ ಕುರಿತು ಮಾಹಿತಿ ನೀಡಿದ ಎಸ್‌ಪಿ ಜಲಾವರ್ ಅಮಿತ್ ಕುಮಾರ್, ಝಲಾವರ್‌ನಲ್ಲಿರುವ ಪಿಪ್ಲೋಡಿ ಸರ್ಕಾರಿ ಶಾಲೆಯಲ್ಲಿ ಬೆಳಿಗ್ಗೆ 8.30 ರ ಸುಮಾರಿಗೆ ಈ ಘಟನೆ ನಡೆದಿದೆ. ಈ ವೇಳೆ ವಿದ್ಯಾರ್ಥಿಗಳು ಶಾಲೆಗೆ ಬಂದಿದ್ದುದರಿಂದ ಘಟನಾ ಸ್ಥಳದಲ್ಲಿ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಅವಶೇಷಗಳಡಿ ವಿದ್ಯಾರ್ಥಿಗಳು, ಶಿಕ್ಷಕರು ಸೇರಿ ಸುಮಾರು ನಲ್ವತ್ತು ಮಂದಿ ಸಿಲುಕಿರುವ ಶಂಕೆ ಇದ್ದು ಅವರ ರಕ್ಷಣೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಹೇಳಿದ್ದಾರೆ.