ಮಂಗಳವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಟ 18 ಭಕ್ತರು ಮೃತಪಟ್ಟ ಘಟನೆ ನಡೆದಿದೆ.
ಹಲವರು ಗಂಭೀರವಾಗಿ ಗಾಯಗೊಂಡಿದ್ದು ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೋಹನಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜಮುನಿಯಾ ಅರಣ್ಯ ಪ್ರದೇಶದ ಬಳಿ ಬೆಳಗಿನ ಜಾವ 4.30 ರ ಸುಮಾರಿಗೆ ಕನ್ಸಾರಿಯಾಗಳನ್ನು ಸಾಗಿಸುತ್ತಿದ್ದ ಬಸ್ ಗ್ಯಾಸ್ ಸಿಲಿಂಡರ್ ಗಳನ್ನು ಸಾಗಿಸುತ್ತಿದ್ದ ಟ್ರಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.
ಶ್ರಾವಣ ಕನ್ವರ್ ಯಾತ್ರೆಯಲ್ಲಿ ಭಾಗವಹಿಸಬೇಕಿದ್ದ ಭಕ್ತರನ್ನು ಕರೆದೊಯ್ಯುತ್ತಿದ್ದ 32 ಆಸನಗಳ ಬಸ್ ಅಪಘಾತಕ್ಕೀಡಾಗಿದೆ ಎಂದು ದುಮ್ಮಾ ವಲಯದ ಇನ್ಸೆಕ್ಟರ್ ಜನರಲ್ ಶೈಲೇಂದ್ರ ಕುಮಾರ್ ಸಿನ್ಹಾ ತಿಳಿಸಿದ್ದಾರೆ.
ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ತ್ವರಿತ ಚಿಕಿತ್ಸೆಗಾಗಿ ಸಾಗಿಸಲಾಗಿದೆ.