ಕೆಟ್ಟು ನಿಂತಿದ್ದ ಲಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಇಬ್ಬರು ಸಾವನಪ್ಪಿದ್ದು,ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಗಾಜನೂರು ಸಮೀಪದ ಅಗ್ರಹಾರ ಬಳಿ ಬುಧವಾರ ಬೆಳಗ್ಗೆ ಸಂಭವಿಸಿದೆ.
ಬಸ್ ಕಂಡಕ್ಟರ್ ಅಣ್ಣಪ್ಪ(40), ಚಳ್ಳಕೆರೆಯ ಹರ್ಷಿತ(35) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಮಂಗಳೂರಿನಿಂದ ಚಳ್ಳಕೆರೆಗೆ ಹೋಗುವ ಖಾಸಗಿ ಬಸ್ ಗಾಜನೂರು ಸಮೀಪದ ಅಗ್ರಹಾರ ಬಳಿ ಕೆಟ್ಟು ನಿಂತಿದ್ದ ಲಾರಿಗೆ ಹಿಂಬಂದಿಯಿಂದ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.15 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ತುಂಗಾನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.